ಜೆಡಿಎಸ್‌ನ 20 ಶಾಸಕರ ಜೊತೆ ಹೈದರಾಬಾದ್‌ಗೆ ತೆರಳಿದ ಹೆಚ್.ಡಿ. ಕುಮಾರಸ್ವಾಮಿ | JANATA NEWS

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಜೆಡಿಎಸ್ ಪಕ್ಷದ 20 ಶಾಸಕರ ಜತೆ ಇಂದು ಹೈದ್ರಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ.
ನಾಳೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ನೂತಕ ಪಕ್ಷ ಸ್ಥಾಪನೆ ಘೋಷಣೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ 20 ಜನ ಶಾಸಕರ ತಂಡ ಹೈದ್ರಾಬಾದ್ಗೆ ಪ್ರಯಾಣ ಬೆಳೆಸಿದೆ.
ಸಿಎಂ ಕೆಸಿಆರ್ ಆಹ್ವಾನದ ಮೇರೆಗೆ ಕುಮಾರಸ್ವಾಮಿ ತಂಡ ನಾಳೆ ಆ ಸಮಾರಂಭದಲ್ಲಿ ಭಾಗಿಯಾಗಲಿದೆ. ಸಿಎಂ ಕೆಸಿಆರ್ ನೂತನ ಪಕ್ಷ ಘೋಷಣೆ ಕಾರ್ಯಕ್ರಮದಲ್ಲಿ ಭಾಗಿ
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಭಾರತ ರಾಷ್ಟ್ರ ಸಮಿತಿ ಪಕ್ಷವನ್ನು ಅಧಿಕೃತವಾಗಿ ನಾಳೆ ಸ್ಥಾಪನೆ ಮಾಡಲಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಭಾರತ ರಾಷ್ಟ್ರ ಸಮಿತಿ (BRS) ಹೆಸರಿನಲ್ಲಿ ನೂತನ ಪಕ್ಷ ಸ್ಥಾಪನೆ ಮಾಡಲಿದ್ದಾರೆ. ಪಕ್ಷ ಸ್ಥಾಪನೆ ಬಗ್ಗೆ ಕೆಲ ತಿಂಗಳ ಹಿಂದೆ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜತೆ ಕೆಸಿಆರ್ ಚರ್ಚೆ ನಡೆಸಿದ್ದರು.