Sat,Apr20,2024
ಕನ್ನಡ / English

ಅಜ್ಜಿಯನ್ನ ಕೊಂದ ಮೊಮ್ಮಗ, ಗೋಡೆಯಲ್ಲಿ ಹೂತಿಟ್ಟು 3 ತಿಂಗಳು ಶವದೊಂದಿಗೆ ವಾಸವಿದ್ದ ಅಮ್ಮ-ಮಗ | JANATA NEWS

07 Oct 2022
2642

ಬೆಂಗಳೂರು : ಅಜ್ಜಿಯನ್ನೇ ಕೊಂದು ಶವದ ಜತೆ 3 ತಿಂಗಳು ವಾಸವಿದ್ದರು ತಾಯಿ-ಮಗ ಇದೀಗ ಅಂದರೆ 5 ವರ್ಷದ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ

ಶಾಂತಕುಮಾರಿ (69) ಹತ್ಯೆ ಪ್ರಕರಣದ ಆರೋಪಿಗಳಾದ ತಾಯಿ-ಮಗನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಂಗೇರಿ‌ ಠಾಣೆಯ ಇನ್‌ಸ್ಪೆಕ್ಟರ್ ವಸಂತ್ ನೇತೃತ್ವದ ತಂಡ ತಾಯಿಯನ್ನೇ ಕೊಲೆಗೈದ ಆರೋಪದಡಿ ಶಶಿಕಲಾ (46) ಮಗ ಸಂಜಯ್ (26) ಎಂಬುವರನ್ನು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿದ್ದಾರೆ.

ಕೆಂಗೇರಿ ಸ್ಯಾಟಲೈಟ್​ ಸಮೀಪದ ಮನೆಯೊಂದರಲ್ಲಿ 69 ವರ್ಷದ ವೃದ್ಧೆ ಶಾಂತಕುಮಾರಿ, ಮಗಳು ಶಶಿಕಲಾ ಮತ್ತು ಮೊಮ್ಮಗ ಸಂಜಯ್​ ಜೊತೆ ವಾಸವಿದ್ದರು. ಪುತ್ರ ಸಂಜಯ್ ಖಾಸಗಿ ಕಾಲೇಜಿನಲ್ಲಿ ಏರೊನಾಟಿಕಲ್ ಇಂಜಿನಿಯರ್ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ.

ಓದಿನಲ್ಲಿ ಪ್ರತಿಭಾವಂತನಾಗಿದ್ದ ಸಂಜಯ್ ಎಸ್ಸೆಸ್ಸೆಲಿ ಹಾಗೂ ಪಿಯುಸಿಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದಿದ್ದ. ಓದುವ ವಿಷಯದಲ್ಲಿ ಮುಂದಿದ್ದ ಸಂಜಯ್ ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ.

2016 ಆಗಸ್ಟ್ ನಲ್ಲಿ ಕಾಲೇಜು ಮುಗಿಸಿ ಸಂಜಯ್ ಮನೆಗೆ ಬರುವಾಗ ಅಜ್ಜಿಗೆ ಗೋಬಿಮಂಜೂರಿ ತಂದುಕೊಟ್ಟಿದ್ದ. ಹೊರಗಡೆಯ ಆಹಾರ ಬೇಡವೆಂದು ನಿರಾಕರಿಸಿದ್ದ ಶಾಂತಕುಮಾರಿ ಮೊಮ್ಮಗನಿಗೆ ಬೈದು ಮೊಮ್ಮಗನ ಮುಖಕ್ಕೆ ಎಸೆದಿದ್ದರು. ಇದರಿಂದ ಸಿಟ್ಟಿಗೆದ್ದ ಮೊಮ್ಮಗ, ಲಟ್ಟಣಿಗೆಯಿಂದ ಅಜ್ಜಿಗೆ ಮನಸೋಇಚ್ಛೆ ಹೊಡೆದಿದ್ದ. ತೀವ್ರ ರಕ್ತಸ್ರಾವವಾಗಿ ಅಜ್ಜಿ ಮೃತಪಟ್ಟಿದ್ದರು.

ಅಜ್ಜಿಯನ್ನು ಮೊಮ್ಮಗನೇ ಕೊಂದಿರುವ ವಿಚಾರ ತಿಳಿದು ಶಾಕ್​ ಆದ ಶಶಿಕಲಾ, ಪೊಲೀಸರಿಗೆ ಮಾಹಿತಿ ನೀಡಲು ಮುಂದಾಗಿದ್ದರು. ಈ ವೇಳೆ ಅಮ್ಮ, ನೀನೇ ನಿನ್ನ ಮಗನನ್ನು ಜೈಲಿಗೆ ಕಳಿಸ್ತೀಯಾ? ಬೇಡ ಅಮ್ಮ ಎಂದು ಗೋಳಾಡಿದ್ದ. ಮಗನನ್ನು ಕಳೆದುಕೊಳ್ಳುವ ಆತಂಕ ಶಶಿಕಲಾಗೆ ಮೂಡಿತ್ತು. ಕೊನೆಗೆ ಕೊಲೆ ರಹಸ್ಯ ಬಚ್ಚಿಡಲು ಅಮ್ಮ-ಮಗ ಇಬ್ಬರೂ ಯೋಜನೆ ರೂಪಿಸಿದ್ದರು.

ಮನೆಯಿಂದ ಶವ ಹೊರತೆಗೆಯುವುದು ಅಸಾಧ್ಯವೆಂದು ನಿರ್ಧರಿಸಿ ಸ್ನೇಹಿತ ಕುಂಬಳಗೋಡಿನ ನಿವಾಸಿ ನಂದೀಶ್ ಗೆ ವಿಷಯ ತಿಳಿಸಿ ಮನೆಗೆ ಸಂಜಯ್ ಕರೆಯಿಸಿಕೊಂಡಿದ್ದ. ಮೂವರು ಒಟ್ಟುಗೂಡಿ ಮನೆಯ ಕಬೋರ್ಡ್ ನಲ್ಲಿ ಶವ ಬಚ್ಚಿಟ್ಟಿದ್ದರು. ವಾಸನೆ ಬರದಿರಲು ಕೆಮಿಕಲ್ಸ್ ಹಾಕಿದ್ದರು. ಬಳಿಕ ಮನೆಯೊಳಗಿನ ಕಬೋರ್ಡ್ ಗೋಡೆ ಕೊರೆದು ಶವವಿಟ್ಟು ಸಿಮೆಂಟ್ ನಿಂದ ಪ್ಲಾಸ್ಟರಿಂಗ್ ಮಾಡಿ ಬಣ್ಣ ಬಳಿದಿದ್ದರು‌.

3 ತಿಂಗಳು ಶವ ಇರುವ ಮನೆಯಲ್ಲೇ ವಾಸವಿದ್ದರು. ಅಷ್ಟರಲ್ಲಿ ಶವದ ವಾಸನೆ ಬರಲಾರಂಭಿಸಿತ್ತು. ಪುನಃ ಬಣ್ಣ ಬಳಿದು ಪ್ಲಾಸ್ಟರಿಂಗ್ ಮಾಡಿದ್ದರು. ಬಳಿಕ ಊರಿಗೆ ಹೋಗಿ ಬರ್ತೀವಿ ಅಂತಾ ಮನೆ ಮಾಲೀಕನಿಗೆ ಹೇಳಿ, ತಾಯಿ-ಮಗ ಇಬ್ಬರೂ ಊರು ಬಿಟ್ಟಿದ್ದರು. 6 ತಿಂಗಳಾದರೂ ಮನೆಗೆ ವಾಪಸ್​ ಬಂದಿರಲಿಲ್ಲ.

ರಿಪೇರಿ ಕೆಲಸಕ್ಕಾಗಿ 2017ರ ಮೇ 7ರಂದು ಮಾಲೀಕ ಮನೆಯ ಬೀಗ ತೆರೆದಾಗ ರಕ್ತಸಿಕ್ತ ಸೀರೆ ಪತ್ತೆಯಾಗಿತ್ತು. ತಕ್ಷಣ ಪೊಲೀಸರಿಗೆ ಮಾಹಿತಿ ರವಾನಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಕೆಂಗೇರಿ ಠಾಣೆ ಪೊಲೀಸರು, ಸ್ಥಳಕ್ಕೆ ದೌಡಾಯಿಸಿ ಮನೆಯಲ್ಲಿ ಶೋಧಿಸಿದಾಗ ಸಂಜಯ್ ಬಿಟ್ಟುಹೋಗಿದ್ದ ಮೊಬೈಲ್ ಪತ್ತೆಯಾಗಿತ್ತು. ಕರೆ ವಿವರ ಪರಿಶೀಲಿಸಿದಾಗ ನಂದೀಶ್ ಮೊಬೈಲ್ ನಂಬರ್ ಸಿಕ್ಕಿದೆ. ಸಂಜಯ್ ಜೊತೆ ನಿರಂತರ ಸಂಪರ್ಕದಲ್ಲಿದ್ದ ನಂದೀಶ್​ನನ್ನ ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆ ವಿಚಾರ ಬಯಲಾಗಿತ್ತು. ಆರೋಪಿ ಹೇಳಿಕೆ ಆಧರಿಸಿ ಗೋಡೆ ಕೊರೆದು ಪರಿಶೀಲಿಸಿದಾಗ ವೃದ್ದೆಯ ಕಳೇಬರ ಪತ್ತೆಯಾಗಿತ್ತು.

ಆರೋಪಿಗಳು‌ ಹುಟ್ಟೂರಾದ ಶಿವಮೊಗ್ಗದ ಸಾಗರಕ್ಕೆ ತೆರಳಿದ್ದರು. ನಂತರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ತಲೆಮರೆಸಿಕೊಂಡಿದ್ದರು. ಸ್ಥಳೀಯ ಹೊಟೇಲ್ ವೊಂದರಲ್ಲಿ ಸಂಜಯ್ ಸಪ್ಲೈಯರ್ ಕೆಲಸ‌ ಹಾಗೂ ತಾಯಿ ಕ್ಲೀನಿಂಗ್ ಕೆಲಸ ಮಾಡಿಕೊಂಡಿದ್ದರು.

5 ವರ್ಷಗಳಿಂದಲೂ ಪೊಲೀಸರಿಗೆ ಸಿಗದೆ ಆರೋಪಿಗಳು ತಲೆಮರೆಸಿಕೊಂಡಿದ್ದರು. ಕೊನೆಗೂ ಆರೋಪಿಗಳನ್ನು ಕಂಗೇರಿ ಪೊಲೀಸರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಬಂಧಿಸಿದ್ದಾರೆ.

RELATED TOPICS:
English summary :Grandson killed grandmother, mother-son lived with corpse for 3 months after burying it in wall

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...