SC, ST ಮೀಸಲಾತಿ ಹೆಚ್ಚಳ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ | JANATA NEWS

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸಿಎಂ ಬೊಮ್ಮಾಯಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಂಪುಟ ಸಭೆಯಲ್ಲಿ ಮೀಸಲಾತಿ ಹೆಚ್ಚಳ ಮಾಡುವ ಕುರಿತು ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆಸಿ ಮಾಧುಸ್ವಾಮಿ, ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15 ರಿಂದ ಶೇ.17ಕ್ಕೆ ಮತ್ತು ಪರಿಶಿಷ್ಠ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ ಎಂದರು.
ಶುಕ್ರವಾರ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲೂ ಕೂಡ ಎಲ್ಲಾ ನಾಯಕರುಗಳು ಮೀಸಲಾತಿ ಹೆಚ್ಚಳದ ಪರ ಒಗ್ಗಟ್ಟಿನಿಂದ ಸರ್ಕಾರಕ್ಕೆ ಮನವಿ ಮಾಡಿದ್ದವು.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಯಿತು, ಸಭೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಸುದಿರ್ಘವಾದಸಾಧಕ ಬಾದಕ ಸಾ ಚರ್ಚೆ ನಡೆಸಿದ ಬಳಿಕ ಈ ಬಗ್ಗೆ ಅಂತಿಮವಾದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಈ ಬಗ್ಗೆ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಳಿಗೆ ಮಾಹಿತಿ ನೀಡಿದ ಕಾನೂನ ಸಚಿವ ಮಾಧುಸ್ವಾಮಿ, ಎಸ್ ಸಿ, ಎಸ್ ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ವರದಿ ಆಧಾರದ ಮೇಲೆ ಒಳಮೀಸಲಾತಿ ಜಾರಿ ಬಗ್ಗೆ ಸರ್ಕಾರ ನಿರ್ಧರಿಸಲಾಗಿದೆ. ವರದಿ ಬಗ್ಗೆ ಯಾವುದೇ ಸಮಯ ನಿಗದಿಯಾಗಿಲ್ಲ. ಎರಡು ಮೂರು ದಿನದಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಸಚಿವರು ಹೇಳಿದರು.
ಪಂಚಮಸಾಲಿ, ಕುರುಬ, ಬೇಡಜಂಗಮ ಮೀಸಲಾತಿ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ. ಇಂದು ಕೇವಲ ಎಸ್ಸಿ, ಎಸ್ಟಿ ಮೀಸಲಾತಿ ಬಗ್ಗೆ ಮಾತ್ರ ಚರ್ಚೆ ನಡೆದಿದೆ ಎಂದು ಮಾಧುಸ್ವಾಮಿ ತಿಳಿಸಿದ್ದಾರೆ .