ಭಾರತ್ ಜೋಡೋ ಯಾತ್ರೆಗೆ ತೆರಳುತ್ತಿದ್ದ ಬಸ್ ಅಪಘಾತ | JANATA NEWS

ಚಿಕ್ಕಬಳ್ಳಾಪುರ : ಭಾರತ್ ಜೋಡೋ ಯಾತ್ರೆಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾದ ಘಟನೆ ಗೌರಿಬಿದನೂರು ಮಾರ್ಗದ ಕಣಿವೆಯಲ್ಲಿ ನಡೆದಿದೆ.
KSRTC ಬಸ್ಗೆ ಈ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಯಾರಿಗೂ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರದಿಂದ ಚಿತ್ರದುರ್ಗದ ಕಾರ್ಯಕ್ರಮಕ್ಕೆ ಈ ಬಸ್ ತೆರಳುತ್ತಿತ್ತು ಎನ್ನಲಾಗಿದೆ. ಖಾಸಗಿ ಬಸ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೆರಳುತ್ತಿದ್ದರು ಎನ್ನಲಾಗಿದ್ದು, ಖಾಸಗಿ ಬಸ್ ಮುಂಭಾಗ ಗ್ಲಾಸ್ ಸಂಪೂರ್ಣ ಪುಡಿಯಾಗಿದೆ. ಅದೃಷ್ಟವಶಾತ್ ಎರಡೂ ಬಸ್ಗಳಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
RELATED TOPICS:
English summary :Bus accident while going to Bharat Jodo Yatra