ಭಾರತ್ ಜೋಡೋ ಯಾರನ್ನು ಜೋಡಿಸುತ್ತಿದೆ ಹಾಗೂ ಯಾರನ್ನು ಒಡೆಯುತ್ತಿದೆ ಎಂದು ಜಗತ್ತಿಗೆ ಗೊತ್ತಿದೆ: ಸಿಎಂ | JANATA NEWS

ಬೆಂಗಳೂರು : ಭಾರತ್ ಜೋಡೋ ಯಾರನ್ನು ಜೋಡಿಸುತ್ತಿದೆ ಹಾಗೂ ಯಾರನ್ನು ಒಡೆಯುತ್ತಿದೆ ಎಂದು ಜಗತ್ತಿಗೆ ಗೊತ್ತು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ರೇಸ್ ಕೋರ್ಸ್ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿ ನಿರಂತರವಾಗಿ ಕಾರ್ಯಕ್ರಮ ಮಾಡಿಕೊಂಡು ಬಂದಿದೆ. ಈಗ ಜನಸಂಕಲ್ಪ ಯಾತ್ರೆ ಪ್ರಾರಂಭ ಮಾಡುತ್ತಿದ್ದೇವೆ. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಯಾತ್ರೆ ಪ್ರಾರಂಭವಾಗಲಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಕಾರ್ಯಕ್ರಮ, ಕೆಲಸಗಳು, ನೀತಿಗಳು ಮತ್ತು ಕೇಂದ್ರದ ಕಾರ್ಯಕ್ರಮಗಳು, ಒಂದೊಂದು ಕ್ಷೇತ್ರದಲ್ಲಿ ಸಾವಿರಾರು ಜನಕ್ಕೆ ಅನುಕೂಲವಾಗಿದೆ.ಅದನ್ನು ಜನರಿಗೆ ಹೇಳಿ ಮುಂದಿನ ದಿನ ಯಾವ ವರ್ಗಕ್ಕೆ ಕಾರ್ಯಕ್ರಮ ಮಾಡಲಿದ್ದೇವೆ.
ಯಾವ ರೀತಿ ಲಾಭ ತೆಗೆದುಕೊಳ್ಳಬೇಕು ಎಂದು ಹೀಗೆ ಹತ್ತು ಹಲವು ವಿಷಯ ಜನರಿಗೆ ತಿಳಿಸಲಿದ್ದೇವೆ. ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಚುನಾವಣೆಗೆ ಸಜ್ಜಾಗಿ ಮತ್ತೊಮ್ಮೆ ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ಕಾರ್ಯಕ್ರಮ ಮಾಡಲಿದ್ದೇವೆ ಎಂದು ತಿಳಿಸಿದರು.
ಸರ್ಕಾರದ ಯೋಜನೆಗಳ ಲಾಭವನ್ನು ಮುಂದಿನ ದಿನಗಳಲ್ಲಿ ಜನರು ಯಾವ ರೀತಿ ತೆಗೆದುಕೊಳ್ಳಬೇಕು ಎಂಬ ತೀರ್ಮಾನದ ಜನರಿಗೆ ತಿಳಿಸುವ ಕೆಲಸ ಮಾಡುತ್ತೇವೆ. ಜೊತೆಗೆ ಬಿಜೆಪಿ ಪದಾಧಿಕಾರಿಗಳಿಗೆ ಚುನಾವಣೆಗೆ ಸಜ್ಜಾಗಲು ಕಾರ್ಯಕ್ರಮ ರೂಪಿಸಲಾಗುವುದು ಎಂದರು. ಜನರಲ್ಲಿ ಬಹಳಷ್ಟು ಉತ್ಸಾಹ ಇದೆ. ದಿನಕ್ಕೆ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆ ಮಾಡುವ ಉದ್ದೇಶ ಇದ್ದರೂ ಜನರ ಬೇಡಿಕೆ ಹೆಚ್ಚಿದೆ. ಜನರ ವಿಶ್ವಾಸ ಗಳಿಸಿ ಮತ್ತೊಮ್ಮೆ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.
ಭಾರತ್ ಜೋಡೋ ಯಾತ್ರೆ ಬಗ್ಗೆ ನಾವು ತಲೆಕೆಡಿಸಿಕೊಂಡಿಲ್ಲ. ಜೋಡೋ ಯಾತ್ರೆ ಯಾರನ್ನು ಜೋಡಿಸುತ್ತಿದೆ, ಯಾರನ್ನು ಒಡೆಯುತ್ತಿದೆ ಎಂದು ಜಗತ್ತಿಗೆ ತಿಳಿದಿದೆ. ಅದಕ್ಕೆ ಯಾವ ಮಹತ್ವವೂ ಉಳಿದಿಲ್ಲ. ನಮ್ಮ ಕೆಲಸ, ನಮ್ಮ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಿ ಚುನಾವಣೆ ಗೆಲ್ಲುವ ಪ್ರಯತ್ನ ಮಾಡುತ್ತಿದ್ದೇವೆ. ಅದಕ್ಕೂ ಜನಸಂಕಲ್ಪ ಯಾತ್ರೆಗೂ ಸಂಬಂಧವಿಲ್ಲ ಎಂದರು.