Fri,Dec09,2022
ಕನ್ನಡ / English

ಬಿಜೆಪಿ ಸರ್ಕಾರ ಗುಂಡಿ ಮುಚ್ಚೋದು ಬಿಟ್ಟು ವಸೂಲಿ ಮಾಡುವ ಕೆಲಸ ಮಾಡುತ್ತಿದೆ: ಹೆಚ್​ ಡಿ ಕುಮಾರಸ್ವಾಮಿ | JANATA NEWS

17 Oct 2022
614

ಬೆಂಗಳೂರು : ಬಿಜೆಪಿ ಸರ್ಕಾರ ಗುಂಡಿ ಮುಚ್ಚೋದು ಬಿಟ್ಟು ವಸೂಲಿ ಮಾಡುವ ಕೆಲಸ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ನಿನ್ನೆ ಅರಸೀಕೆರೆ ಸಮೀಪ ರಸ್ತೆ ಅಪಘಾತ ಆಯ್ತು. ಸರ್ಕಾರ ಇಡೀ ರಾಜ್ಯದಲ್ಲಿ ಒಂದು ಸರ್ವೆ ಮಾಡಿಸಲಿ. ಬೆಂಗಳೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಈ ಗುಂಡಿ ಸ್ಥಿತಿ ಇದೆ. ಸಿಎಂ ವಿಡಿಯೋ ಕಾನ್ಫರೆನ್ಸ್ ಮಾಡ್ತಿದ್ದಾರೆ. ಇಂತಹ ಕಾನ್ಫರೆನ್ಸ್ ಎಷ್ಟು ಆಗಿದೆ. ಆದರೆ ಗುಂಡಿ ಮಾತ್ರ ಮುಚ್ಚಿಲ್ಲ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಡಿಯೋ ಕಾನ್ಫರೆನ್ಸ್ ‌ಮಾಡ್ತಿದ್ದಾರೆ. ಇಂತಹ ಕಾನ್ಫರೆನ್ಸ್ ಎಷ್ಟೋ ಆಗಿದೆ. ಆದರೆ ಗುಂಡಿ ಮಾತ್ರ ಮುಚ್ಚಿಲ್ಲ. ಜನರ ಜೀವನ ಕಾಪಾಡುವ ಕೆಲಸ ಈ ಸರ್ಕಾರ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮಳೆ ಬಂದಿರುವುದು ನಿಜ. ಕರ್ನಾಟಕದಲ್ಲಿ ಮಾತ್ರ ಮಳೆ ಆಗಿಲ್ಲ. ಮಳೆಗೆ ಅಗತ್ಯವಾದ ತಯಾರಿ ಈ ಸರ್ಕಾರ ಮಾಡಿಕೊಂಡಿಲ್ಲ. ಒರಿಸ್ಸಾ ಸೇರಿದಂತೆ ಅನೇಕ ಕಡೆ ಪ್ರತಿ ವರ್ಷ ಮಳೆ ಬಂದರೂ ಎಲ್ಲವೂ ಸರಿ ಮಾಡುತ್ತಾರೆ. ಆದರೆ ನಮ್ಮಲ್ಲಿ ಅಂತಹ ಕೆಲಸ ಆಗ್ತಿಲ್ಲ. ಗುಂಡಿ ಮುಚ್ಚುವ ಕೆಲಸ ಮಾತ್ರ ಆಗ್ತಿಲ್ಲ ಎಂದು ಟೀಕಿಸಿದರು.

ರಸ್ತೆಗಳಲ್ಲಿ, ಹೈವೆ ರಸ್ತೆಯಲ್ಲಿ ಎಎಸ್​ಐ ಸೇರಿ 3-4 ಮಂದಿ ಪೊಲೀಸರು ನಿಂತು ಜನರ ವಾಹನಗಳನ್ನು ನಿಲ್ಲಿಸಿ ವಸೂಲಿ ಮಾಡಲು ನಿಂತಿರುತ್ತಾರೆ. ಬೆಳಗ್ಗೆ ವಸೂಲಿ ಮಾಡಿ ರಾತ್ರಿ ಎಲ್ಲರು ಹಂಚಿಕೊಳ್ಳುತ್ತಾರೆ. ವಸೂಲಿ ಮಾಡುವುದಕ್ಕೆ ಈ ಸರ್ಕಾರ ನಿಂತಿದೆ ಎಂದು ಹೆಚ್​ಡಿಕೆ ಗಂಭೀರ ಆರೋಪ ಮಾಡಿದರು.

RELATED TOPICS:
English summary :The BJP government is working to close the potholes and collect the money: HD Kumaraswamy

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...