ಭೀಕರ ಅಪಘಾತ: ಹುಟ್ಟುಹಬ್ಬದ ಖುಷಿಯಲ್ಲಿದ್ದ ಯುವಕನ ಕೈ ಕಟ್, ಯುವತಿ ಸ್ಥಳದಲ್ಲೇ ಸಾವು | JANATA NEWS

ಬೆಂಗಳೂರು : ಬೈಕ್ ರಸ್ತೆವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಮೃತಪಟ್ಟು,ಯುವಕನ ಕೈ ತುಂಡಾಗಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಏರ್‌ಪೋರ್ಟ್ ಫ್ಲೈ ಓವರ್ ಮೇಲೆ ಬೈಕ್ನಲ್ಲಿ ವೇಗವಾಗಿ ಬರ್ತಿದ್ದ ಯುವಕ ನಿಯಂತ್ರಣ ತಪ್ಪಿ ವೇಗವಾಗಿ ಬಂದು ಡಿವೈಡರ್ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿ, ಯುವಕನ ಕೈ ತುಂಡಾಗಿರುವ ಘಟನೆ ನಡೆದಿದೆ
ಸನಾ ಸಾಹಿಬಾ (18) ಮೃತಪಟ್ಟ ಯುವತಿಯಾಗಿದ್ದು, ಸ್ನೇಹಿತ ಜಿಶಾನ್ ಎಂಬಾತನ ಬಲಗೈ ತುಂಡಾಗಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇಬ್ಬರೂ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದರು ಎನ್ನಲಾಗಿದೆ. ಇವತ್ತು ಜಿಶಾನ್ ಹುಟ್ಟುಹಬ್ಬ ಹಿನ್ನಲೆ ಇಬ್ಬರು ಸ್ನೇಹಿತರು ಬೈಕ್ ನಲ್ಲಿ ದೇವನಹಳ್ಳಿ ಕಡೆ ಹೋಗುತ್ತಿದ್ದಾಗ, ಜಕ್ಕೂರು ಮೇಲ್ಸೇತುವೆ ಬಳಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.