ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಮಾರಕಾಸ್ತ್ರದಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ | JANATA NEWS
ಬೆಳಗಾವಿ : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಮಾರಕಾಸ್ತ್ರದಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಬಳಿ ನಡೆದಿದೆ.
ಬೆಳಗಾವಿ ಶಿವಾಜಿ ನಗರ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ (16) ಕೊಲೆಯಾದ ವಿದ್ಯಾರ್ಥಿ. ಹತ್ಯೆಗೂ ಮುನ್ನ ವಿದ್ಯಾರ್ಥಿ ನಾಪತ್ತೆಯಾಗಿರುವ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಆತನ ಕುಟುಂಬಸ್ಥರು ದೂರು ದಾಖಲಿಸಿದ್ದರು.
ಅರೆ ಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ಸಿಕ್ಕಿದ್ದು, ಬೆಳಗಾವಿಯ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆ ಹಚ್ಚಲಾಗಿದೆ.
ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ಗಿರೀಶ್ ಭೇಟಿ ಪರಿಶೀಲನೆ ಮಾಡಿದ್ದಾರೆ. ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.