ಹಳ್ಳಕ್ಕೆ ಉರುಳಿದ ಸಾರಿಗೆ ಬಸ್, 25 ಮಂದಿಗೆ ಗಾಯ, ಇಬ್ಬರು ಪ್ರಯಾಣಿಕರು ಗಂಭೀರ | JANATA NEWS

ಚಾಮರಾಜನಗರ : ಕೆಎಸ್ಆರ್ಟಿಸಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರ ಪೈಕಿ 25 ಮಂದಿ ಗಾಯಗೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ.
ಘಟನೆಯಲ್ಲಿ 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಚಾಲಕ ಚಂದ್ರಶೇಖರ್ ಕೈ ಮತ್ತು ಹೊಟ್ಟೆ ಭಾಗಕ್ಕೆ ಬಲವಾದ ಪೆಟ್ಟುಬಿದ್ದಿದೆ. ಇನ್ನು ಬಸ್ ನಿರ್ವಾಹಕರ ಬೆನ್ನಿಗೆ ಮತ್ತು ಹೊಟ್ಟೆಗೆ ಪೆಟ್ಟು ಬಿದ್ದಿದ್ದು, ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.
RELATED TOPICS:
English summary :Transport bus fell into ditch, 25 injured