ರಸ್ತೆ ಗುಂಡಿಗೆ ಭೀಕರ ಅಪಘಾತ, ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ, ಬೈಕ್ ಸವಾರ ಸ್ಥಳದಲ್ಲೇ ಸಾವು | JANATA NEWS

ಬೆಂಗಳೂರು : ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಪಲ್ಟಿಯಾದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ್ದಾನೆ.
ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆಯಲ್ಲಿ ಕೇರಳ ಮೂಲದ ಹರ್ಷದ್ (24) ಸಾವನ್ನಪ್ಪಿದ್ದಾರೆ.
ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ಕಳೆದ ರಾತ್ರಿ ರಸ್ತೆ ಗುಂಡಿಯಿಂದಾಗಿ ಭೀಕರ ಅಪಘಾತ ಸಂಭವಿಸಿದೆ.
ಗುಂಡಿ ತಪ್ಪಿಸಲು ರಸ್ತೆಯಲ್ಲಿ ಕಾರೊಂದು ಪಲ್ಟಿಯಾಗಿತ್ತು. ಈ ವೇಳೆ ಮುಂದೆ ಬರ್ತಿದ್ದ ಬೈಕ್ ಪಲ್ಟಿಯಾದ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಕೇರಳ ಮೂಲದ ಅರ್ಷದ್ (24) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾನೆ. ಘಟನೆಯಲ್ಲಿ ಮತ್ತೋರ್ವ ವಿದ್ಯಾರ್ಥಿ ರಾಹುಲ್‍ಗೆ ಗಂಭೀರ ಗಾಯಗಳಾಗಿವೆ. ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ.