Tue,Jan31,2023
ಕನ್ನಡ / English

ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ | JANATA NEWS

01 Nov 2022
914

ಬೆಂಗಳೂರು : ಡಾ.ಪುನೀತ್‌ರಾಜ್‌ಕುಮಾರ್‌ಗೆ ಮರೋಣತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ, ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ, ಗಣ್ಯರ ಸಮ್ಮುಖದಲ್ಲಿ ರಾಜರತ್ನ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಕರ್ನಾಟಕ ಸರ್ಕಾರ ಗೌರವಿಸಿತು.

ಡಾ.ಸುಧಾಮೂರ್ತಿ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ನೀಡುವ ಮಾಡುವ ಮೂಲಕ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.

ಇದೇ ವೇಳೆ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್‌ ಕುಟುಂಬದ ಸದ್ಯಸರು, ಖ್ಯಾತ ನಟರಾದ ರಜಿನಿಕಾಂತ್‌, ಜ್ಯೂ.ಎನ್‌ಟಿಆರ್‌ ಸೇರಿದಂತೆ ರಾಜಕೀಯ ನಾಯಕರುಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಜಕುಮಾರ್ ಅವರ ಎಲ್ಲ ಕುಟುಂಬಸ್ಥರು ಕೂಡ ಹಾಜರಿದ್ದರು. ಪ್ರಶಸ್ತಿ ಸ್ವೀಕರಿಸಿದ ಅಶ್ಚಿನಿ ಪುನೀತ್​ ರಾಜಕುಮಾರ್​​​​​​ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳಿದರು. ಇದೇ ವೇಳೆ ರಾಜ್ಯದ ಜನರಿಗೆ ನಮನ ಸಲ್ಲಿಸಿದರು.

ರಜನಿ ಕಾಂತ್‌ ಅವರು ಮಾತನಾಡಿ, ಸಿಎಂ ಸಮ್ಮುಖದಲ್ಲಿ ಏಳು ಕೋಟಿ ಕನ್ನಡ ಮಕ್ಕಳಿಗೆ ರಾಜೋತ್ಸವದ ಶುಭಾಶಯಗಳು, ಅಪ್ಪು ಸಾಧಾರಣ ವ್ಯಕ್ತಿಯಲ್ಲ, ಆತ ಅಪಾರವಾದದ್ದನ್ನು ಸಾಧಿಸಿದ್ದಾರೆ. ಕಲಿಯುಗಕ್ಕೆ ಪುನೀತ್ ದೇವರ ಮಗು, ನಚಿಕೆತ, ಮಾರ್ಕಾಂಡೇಯರ ಸಾಲಿಗೆ ಸೇರುವವರು ಎಂದರು. ಎನ್ ಟಿಅರ್, ಎಂಜಿಆರ್, ಶಿವಾಜಿಗಣೇಶನ್, ರಾಜ್ ಕುಮಾರ್ ಅವರು 50 ವರ್ಷದಲ್ಲಿ ಸಾಧಿಸಿದ್ದನ್ನು ಅಪ್ಪು 20 ವರ್ಷಗಳಲ್ಲಿ ಸಾಧಿಸಿದ್ದರು. ಅಪ್ಪು ಯಾವಾಗಲೂ ನಮ್ಮೊಂದಿಗೇ ಇರ್ತಾರೆ ಎಂದರು.

ಜ್ಯೂ. ಎನ್‌ಟಿಆರ್‌ ಮಾತನಾಡಿ, ಪರಂಪರೆ ಮತ್ತು ಉಪನಾಮ ಅನ್ನೊದು ಹಿರಿಯರಿಂದ ಬರುತ್ತದೆ ವ್ಯಕ್ತಿತ್ವದ ಅನ್ನೋಂದು ಸ್ವಂತ ಸಂಪಾದನೆ, ಸ್ವಂತ ವ್ಯಕ್ತಿತ್ವದಿಂದ ನಗುವಿನಿಂದಲೇ ಒಂದು ರಾಜ್ಯ ಗೆದ್ದ ರಾಜ ಪುನೀತ್ ರಾಜ್ ಕುಮಾರ್, ಅವರು ಎಲ್ಲಕ್ಕೂ ಮಿಗಿಲಾಗಿ ಶ್ರೇಷ್ಠ ವ್ಯಕ್ತಿತ್ವದವರಾಗಿದ್ದರು. ಪುನೀತ್ ನಗುವಿನ ಒಡೆಯ ಅವರ ವ್ಯಕ್ತಿತ್ವದಿಂದ ಅಭಿಮಾನಿಗಳನ್ನು ಪಡೆದಿದ್ದರು, ಇನ್ನೂ ಇದೇ ವೇಳೇ ನಾನು ಇಲ್ಲಿಗೆ ಬರಲುಕಾರಣ ಸಾಧನೆ ಕಾರಣದಿಂದ ಅಲ್ಲ ಬದಲಿಗೆ ಪುನೀತ್‌ ರಾಜ್‌ಕುಮಾರ್‌ ಅವರ ಸ್ನೇಹಿತ ಅನ್ನುವ ಕಾರಣದಿಂದ ನನಗೆ ಸಂತೋಶ ಅಂತ ಹೇಳಿದರು. ಕರ್ನಾಟಕ ರತ್ನ ಅಂದ್ರೆ ಅದಕ್ಕೆ ಪುನೀತ್‌ ಹೆಸರು ಅಂತ ಹೇಳಿದರು. ಕರ್ನಾಟಕ ರತ್ನದ ಅರ್ಥವೇ ಪುನೀತ್ ರಾಜ್ ಕುಮಾರ್ ಅವರಾಗಿದ್ದಾರೆ.

RELATED TOPICS:
English summary :Puneeth Rajkumar awarded Karnataka Ratna Award

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...