Fri,Dec09,2022
ಕನ್ನಡ / English

ವೈದ್ಯರ ನಿರ್ಲಕ್ಷ್ಯ, ಗರ್ಭಿಣಿ, ಅವಳಿ ಮಕ್ಕಳ ದುರಂತ ಸಾವು! ಜಿಲ್ಲಾಸ್ಪತ್ರೆಯ ವೈದ್ಯೆ , ಸಿಬ್ಬಂದಿ ಅಮಾನತು | JANATA NEWS

03 Nov 2022
518

ತುಮಕೂರು : ಜಿಲ್ಲಾಸ್ಪತ್ರೆಯ ವೈದ್ಯರ ಎಡವಟ್ಟಿಗೆ ಬಾಣಂತಿ ಹಾಗೂ ಅವಳಿ ಮಕ್ಕಳು ಅಸುನೀಗಿದ ಹೃದಯವಿದ್ರಾವಕ ಘಟನೆ ತುಮಕೂರು ನಗರದ ಭಾರತಿನಗರದ ಅಭಯ ಆಂಜನೇಯನ ಸ್ವಾಮಿ ದೇವಸ್ಥಾನದ ಬಳಿ ಸಂಭವಿಸಿದೆ.

ಬಾಣಂತಿ ಕಸ್ತೂರಿ(30), ಅವಳಿ ಮಕ್ಕಳು ಮೃತಪಟ್ಟಿದ್ದಾರೆ. ತಮಿಳುನಾಡು ಮೂಲದ ಕಸ್ತೂರಿ 1 ತಿಂಗಳಿಂದ ಓರ್ವ ಪುತ್ರಿ ಜತೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಗರ್ಭಿಣಿ ಕಸ್ತೂರಿಗೆ ನಿನ್ನೆ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಸ್ಥಳೀಯರು ಆಟೋದಲ್ಲಿ ತುಮಕೂರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು.

ತಾಯಿ ಕಾರ್ಡ್​, ಆಧಾರ್​ ಕಾರ್ಡ್​ ಇಲ್ಲವೆಂದು ದಾಖಲಿಸಿಕೊಳ್ಳಲು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದು, ನಾವು ಚಿಕಿತ್ಸೆ ನೀಡಲ್ಲ ಎಂದು ವೈದ್ಯರು ಕೂಡ ನಿರಾಕರಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಿರಿ ಎಂದು ಸಿಬ್ಬಂದಿ ಹೇಳಿದ್ದು, ಬೆಂಗಳೂರಿಗೆ ಹೋಗಲು ಹಣ ಇಲ್ಲದೆ ಕಸ್ತೂರಿ ನೋವಿನಲ್ಲೇ ವಾಪಸ್​ ಮನೆಗೆ ಹಿಂತಿರುಗಿದ್ದರು.

ಇಂದು ಮುಂಜಾನೆ ಕಸ್ತೂರಿ ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ಮಗುವಿಗೆ ಜನ್ಮ ನೀಡುವಾಗ ರಕ್ತಸ್ರಾವವಾಗಿ ಕಸ್ತೂರಿ ಹಾಗೂ ಅವಳಿ ಮಕ್ಕಳೂ ಸಾವನ್ನಪ್ಪಿವೆ.

ಬಾಣಂತಿ ಮತ್ತು ಇಬ್ಬರು ಮಕ್ಕಳ ಸಾವಿಗೆ ತುಮಕೂರು ಜಿಲ್ಲಾಸ್ಪತ್ರೆ ವೈದ್ಯರೇ ಕಾರಣ. ಹೆರಿಗೆ ನೋವೆಂದು ಬಂದಾಗ ದಾಖಲಿಸಿಕೊಂಡಿದ್ದರೆ ತಾಯಿ ಮತ್ತು ಮಕ್ಕಳಿಬ್ಬರು ಬದುಕುತ್ತಿದ್ದರು. ವೈದ್ಯರ ನಿರ್ಲಕ್ಷ್ಯವೇ ಮೂವರ ಸಾವಿಗೆ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ.

ಪ್ರಕರಣ ಸಂಬಂಧ ಘಟನೆಗೆ ಕಾರಣರಾದ ಆಸ್ಪತ್ರೆ ವೈದ್ಯೆ ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ತುಮಕೂರು ಡಿಹೆಚ್ ಒ ಮಂಜುನಾಥ್ ಬಾಣಂತಿ ಹಾಗೂ ಮಗು ಸಾವಿಗೆ ಕಾರಣರಾದ ವೈದ್ಯೆ ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸುವಂತೆ ಸೂಚನೆ ನೀಡಿದ್ದರು.

RELATED TOPICS:
English summary :Negligence of doctors, tragic death of pregnant twins! District hospital doctor, staff suspended

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...