Thu,Nov30,2023
ಕನ್ನಡ / English

ನಾವು ನಮ್ಮ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು | JANATA NEWS

04 Nov 2022
2002

ಬೆಂಗಳೂರು : ಪಕ್ಷದ ಸಂಘಟನೆಗೆ ನಾವು ನಮ್ಮ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಬಿಜೆಪಿಯವರು ಸರ್ಕಾರ ಇದೆ ಎಂದು ಚುನಾವಣಾ ಬಾಂಡ್ ಹೆಸರಲ್ಲಿ ಹಣ ಸಂಗ್ರಹಿಸಿದ್ದಾರೆ. ಆದರೆ ನಮಗೆ ಬಾಂಡ್ ಕೊಡುವವರಿಲ್ಲ. ಹೀಗಾಗಿ ಪಕ್ಷದ ಸಂಘಟನೆಗೆ ನಾವು ನಮ್ಮ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಬಿಜೆಪಿಯವರು ಏನಾದರೂ ಟೀಕೆ ಮಾಡಲಿ. ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಅರ್ಜಿ ಶುಲ್ಕ 5 ಸಾವಿರ ಹಾಗೂ ಅರ್ಜಿ ಸಲ್ಲಿಸುವಾಗ 2 ಲಕ್ಷ, 1 ಲಕ್ಷ ರು. ಡಿಡಿ ಪಡೆದರೆ ಬಿಜೆಪಿಯವರಿಗೇನು ನೋವು ಎಂದು ಡಿಕೆಶಿ ಕಿಡಿಕಾರಿದರು.

ನಿಮ್ಮ ಪಕ್ಷದ ಕಾರ್ಯಕರ್ತರೇ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ ಎಂಬ ಪ್ರಶ್ನೆಗೆ, 'ನನ್ನ ಬಳಿ ಯಾರೂ ಕೂಡ ಅಸಮಾಧಾನ ವ್ಯಕ್ತಪಡಿಸಿಲ್ಲ. ಅಸಮಾಧಾನಗೊಳ್ಳುವವರು ಪಕ್ಷದಲ್ಲಿ ಇರುವುದು ಬೇಡ, ಅವರು ಪಕ್ಷ ತೊರೆಯಬಹುದು. ಪಕ್ಷದ ವತಿಯಿಂದ ಎಲ್ಲರನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಇದು ಪಕ್ಷದ ವಿಚಾರ. ಪಕ್ಷ ಉಳಿಯಬೇಕು. ಪಕ್ಷ ಹಾಗೂ ಪಕ್ಷದ ಬಾವುಟ ಕಟ್ಟುವವರು ಯಾರು? ಮಾತನಾಡುವವರು ಬಂದು ಪಕ್ಷ ಕಟ್ಟುತ್ತಾರಾ?' ಎಂದು ಖಾರವಾಗಿ ಪ್ರಶ್ನಿಸಿದರು.

ಕಾಂಗ್ರೆಸ್ ಬಾಗಿಲು ಕ್ಲೋಸ್ ಆಗಲಿದೆ ಎಂಬ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಬಾಗಿಲು ಮುಚ್ಚುವುದಾದರೆ, ಅವರು ಕಾಂಗ್ರೆಸ್ ಶಾಸಕರನ್ನು ಕಾಡಿ ಬೇಡಿ, ಕಾಲಿಗೆ ಬಿದ್ದು, ಹಣ ಕೊಟ್ಟು ಖರೀದಿ ಮಾಡಿದರಲ್ಲ. ನಮ್ಮ ಪಕ್ಷದ 13 ಹಾಗೂ ಜೆಡಿಎಸ್‌ನ 3 ಸದಸ್ಯರನ್ನು ಕರೆದುಕೊಂಡರಲ್ಲ, ಆಗೇನು ಅವರ ಪಕ್ಷದ ಬಾಗಿಲು ಬಂದ್ ಆಗಿತ್ತಾ? ಅವರಿಗೆ ತಾಕತ್ತಿದ್ದರೆ ಜನಮತದ ಆಧಾರದ ಮೇಲೆ ಗೆಲ್ಲಬೇಕಿತ್ತು. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ' ಎಂದು ಕಿಡಿಕಾರಿದರು.

RELATED TOPICS:
English summary :If we collect money from our workers, what is the pain for BJP

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...