ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧಿಸದಿದ್ದರೆ ಒಳ್ಳೆಯದು | JANATA NEWS

ಹುಬ್ಬಳ್ಳಿ : ವಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧಿಸದೇ ಇದ್ದರೆ ಸೂಕ್ತ ಎಂದು ಮಾಜಿ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ.
ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವಂತೆಯೇ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳಲಾರಂಭಿಸಿವೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದಾರೆ.
ಇದರ ನಡುವೆ ಅವರ ಅಪ್ಪಟ ಅನುಯಾಯಿ ಎನಿಸಿಕೊಂಡ ಮಾಜಿ ಸಚಿವ ಸಂತೋಷ್ ಲಾಡ್ ಸಿಎಂ ಕನಸು ಕಾಣ್ತಿರೋ ಸಿದ್ಧರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸೋದು ಬೇಡ ಅಂತ ಹೊಸ ಬಾಂಬ್ ಸಿಡಿಸಿದ್ದಾರೆ. ಇದು ಭಾರಿ ಚರ್ಚೆಗೆ ಕಾರಣವಾಗಿದೆ.
ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ರಾಜ್ಯ ಪ್ರವಾಸ ಮಾಡಲಿ, ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಲಿ ಈ ಬಾರಿ ಚುನಾವಣೆ ಅವರು ಸ್ಪರ್ಧಿಸದಿದ್ದರೆ ಸೂಕ್ತ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.