Sat,May18,2024
ಕನ್ನಡ / English

ದಕ್ಷಿಣ ಪಿನಾಕಿನಿ ನದಿ ನೀರು ಹಂಚಿಕೆ ನೆಪದಲ್ಲಿ ನ್ಯಾಯಾಧಿಕರಣ ರಚಿಸಲು ಕೇಂದ್ರ ಹುನ್ನಾರ | JANATA NEWS

18 Nov 2022
7464

ಬೆಂಗಳೂರು : ದಕ್ಷಿಣ ಪಿನಾಕಿನಿ ನದಿ ನೀರಿನ ವಿಷಯದಲ್ಲಿ ಕೇಂದ್ರ ಸರ್ಕಾರ ಕನ್ನಡಿಗರ ಹಕ್ಕು ಕಸಿಯಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ದಕ್ಷಿಣ ಪಿನಾಕಿನಿ ನದಿ ನೀರಿನ ವಿಷಯಕ್ಕೆ ಹೊಸ ನ್ಯಾಯಾಧಿಕರಣ ರಚನೆ ಮಾಡುವ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ಅಕ್ಷಶಃ ರಾಜ್ಯದ ಪಾಲಿಗೆ ಮರಣಶಾಸನ.

ಇದನ್ನು ರಾಜ್ಯ ಬಿಜೆಪಿ ಸರ್ಕಾರ ಮುಲಾಜಿಲ್ಲದೆ ವಿರೋಧಿಸಬೇಕು ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಕಾವೇರಿ ವಿವಾದದಲ್ಲಿ ಕರ್ನಾಟಕವು ಒಂದು ಶತಮಾನ ಕಾಲ ಸಂಘರ್ಷ ನಡೆಸಿದ್ದಾಯಿತು. ಮೇಕೆದಾಟು ವಿವಾದಕ್ಕೆ ನರೇಂದ್ರ ಮೋದಿ ಸರಕಾರ ಇನ್ನೂ ತುಪ್ಪ ಸುರಿಯುತ್ತಾ, ಆ ಯೋಜನೆಗೆ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿದೆ. ಆಗಲೇ, ಪಿನಾಕಿನಿ ನದಿ ವಿಷಯದಲ್ಲಿ ರಾಜ್ಯಕ್ಕೆ ಕಾನೂನು ಕುಣಿಕೆ ಬಿಗಿಯಲು ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ ಎಂದಿದ್ದಾರೆ.

ರಾಜಕೀಯ ಕಾರಣಕ್ಕಾಗಿ ದಕ್ಷಿಣ ಪಿನಾಕಿನಿ ನದಿ ನೀರಿನ ಹಕ್ಕನ್ನು ಕರ್ನಾಟಕದಿಂದ ಕಸಿಯಲು ಕೇಂದ್ರ ಹವಣಿಸುತ್ತಿದೆ. ಕಾವೇರಿ, ಕೃಷ್ಣಾ, ಮಹದಾಯಿ ಸೇರಿ ವಿವಿಧ ಜಲ ವಿವಾದಗಳಲ್ಲಿ ಕರ್ನಾಟಕವನ್ನು ಕಾಡಿದಂತೆ, ವಿವಾದವೇ ಅಲ್ಲದ ದಕ್ಷಿಣ ಪಿನಾಕಿನಿಯನ್ನೂ ವಿವಾದದ ಕೂಪಕ್ಕೆ ತಳ್ಳಿ ಕನ್ನಡಿಗರನ್ನು ಕಾಡುವ ಹವಣಿಕೆ ಇದಷ್ಟೇ.

ದಕ್ಷಿಣ ಪಿನಾಕಿನಿ ನದಿ ನೀರಿನ ವಿಷಯಕ್ಕೆ ಹೊಸ ನ್ಯಾಯಾಧಿಕರಣ ರಚನೆ ಮಾಡುವ ಕೇಂದ್ರ ಬಿಜೆಪಿ ಸರಕಾರದ ನಿರ್ಧಾರ ಅಕ್ಷಶಃ ರಾಜ್ಯದ ಪಾಲಿಗೆ ಮರಣಶಾಸನ. ಇದನ್ನು ರಾಜ್ಯ ಸರ್ಕಾರ ಮುಲಾಜಿಲ್ಲದೆ ವಿರೋಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜಕೀಯ ಲಾಭದ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ನೆಲ, ಜಲ, ಭಾಷೆಯಂತಹ ವಿಷಯಗಳನ್ನು ಇಟ್ಟುಕೊಂಡು ದಕ್ಷಿಣ ರಾಜ್ಯಗಳ ನಡುವೆ ಜಗಳ ಹಚ್ಚಲು ಷಡ್ಯಂತ್ರ ನಡೆಸಿದೆ. ರಾಜ್ಯದ ವಿರೋಧವಿದ್ದರೂ ಕೇಂದ್ರವು ನ್ಯಾಯಾಧಿಕರಣ ರಚನೆ ಮಾಡಲು ಹೊರಟಿದೆ. ಇದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Central intention to set up a tribunal on the pretext of sharing South Pinakini river water

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...