Thu,Apr25,2024
ಕನ್ನಡ / English

ಒಂದೇ ದಿನದೊಳಗೆ ಮಹಿಳಾ ಆಯೋಗದ ದೂರುಗಳ ತನಿಖೆ ಪ್ರಾರಂಭಿಸಲು ಸೂಚನೆ | JANATA NEWS

25 Nov 2022
2721

ಬೆಂಗಳೂರು : ಮಹಿಳಾ ಆಯೋಗದಿಂದ ಸ್ವೀಕಾರವಾದ ದೂರುಗಳನ್ನು 7-8 ಗಂಟೆಗಳೊಳಗೆ ನೋಂದಣಿಯಾಗಿ ತನಿಖೆ ಪ್ರಾರಂಭಿಸಬೇಕೆಂದು ಡಿಜಿ ಅವರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಹಿಳಾ ಆಯೋಗಕ್ಕೆ ಸಮರ್ಥ ವಕೀಲರ ನೇಮಕ ಮಾಡಲಾಗುವುದು. ನಿರ್ಭಯ ಯೋಜನೆಯಡಿ ಜಾರಿ ಮಾಡಿರುವ ಕಾನೂನಿನ ಬಗ್ಗೆ ಪುರುಷರಿಗೆ ಜಾಗೃತಿ ಮೂಡಿಸುವುದು ಅಗತ್ಯ. ಅನ್ಯಾಯ ಆಗುವ ಮೂಲದಿಂದಲೇ ಅರಿವು ಮೂಡಿಸಬೇಕು ಎಂದರು.

ಮಹಿಳಾ ಆಯೋಗಕ್ಕೆ ಇನ್ನಷ್ಟು ಅಧಿಕಾರದ ಜೊತೆಗೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸಲು ಸಿದ್ಧವಿದೆ ಎಂದರು.

ಇದಲ್ಲದೇ ಕಲ್ಯಾಣ ಕೆಲಸಗಳನ್ನು ಸರ್ಕಾರ ಕೈಗೊಂಡಿದೆ. ಮಹಿಳೆಯರ ಪೌಷ್ಟಿಕತೆ ಹೆಚ್ಚಿಸಲು ಕ್ರಮ ವಹಿಸಿದೆ.

ಕೆಲಸ ಮಾಡುವ ಗರ್ಭಿಣಿಯರಿಗೆ ವಿಶೇಷ ಸ್ಥಳ ನಿಗದಿ, 5 ಪ್ರಮುಖ ನಗರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಹಿಳೆಯರಿಗೆ ಹಾಸ್ಟೆಲ್, ಐಐಎಂ ತರಬೇತಿ, ಎಲಿವೆಟ್ ಯೋಜನೆಯಡಿ ಸ್ಟಾರ್ಟ್ ಅಪ್ ಗೆ ಅವಕಾಶ, ಸ್ತ್ರೀ ಶಕ್ತಿ ಸಂಘಗಳಿಗೆ ಸ್ರ್ತೀ ಸಾಮರ್ಥ್ಯ ಯೋಜನೆ ಜಾರಿಗೆ ತಂದಿದ್ದೇವೆ.

ಮಹಿಳೆಯರಿಗೆ ವಿಶೇಷ ಕ್ಲಾಸ್ ರೂಮ್​​ ನಿರ್ಮಾಣ, ಆಶಾ ಕಾರ್ಯಕರ್ತೆಯರು ಹಾಗೂ ಅಡುಗೆ ಮಾಡುವವರ ಗೌರವಧನ ಹೆಚ್ಚಳ ಮಾಡಿದ್ದೇವೆ‌.

ಎನ್.ಪಿ.ಎಸ್ ಯೋಜನೆ ಮರುಪ್ರಾರಂಭವಾಗಿದೆ. ಈ ವರ್ಷ 4000 ಹೊಸ ಅಂಗನವಾಡಿ ನಿರ್ಮಾಣವಾಗುತ್ತಿದೆ. ಮಹಿಳೆಯರಿಗೆ ಎಲ್ಲ ಹಂತದ ನೆರವು ಒದಗಿಸಲಾಗುತ್ತಿದೆ. ಮಹಿಳೆಯರು ಸಬಲರಾದರೆ ದೇಶ ಸಬಲವಾಗುತ್ತದೆ ಎಂದರು.

ನಿರ್ಭಯ ಅಡಿ ಬೆಂಗಳೂರಿನ ಲ್ಲಿ 7500 ಕೃತಕ ಬುದ್ಧಿಮತ್ತೆಯ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ರಾತ್ರಿ ವೇಳೆ ಕೆಲಸ ಮುಗಿಸಿ ಬರುವ ಮಹಿಳೆಯಾರಿಗೆ ಇದು ಸುರಕ್ಷತೆ ಒದಗಿಸುತ್ತದೆ. ಮಹಿಳಾ ಪೊಲೀಸ್ ಒಳಗೊಂಡ ಪಿಂಕ್ ಹೊಯ್ಸಳ ವಾಹನಗಳು ಮಹಿಳೆಯರನ್ನು ರಕ್ಷಿಸಲು ಸಂಚರಿಸುತ್ತವೆ. ಅಲ್ಪಾವಧಿ ಸ್ವಯಂ ರಕ್ಷಣಾ ತರಬೇತಿಯನ್ನು ಶಾಲಾ ಕಾಲೇಜುಗಳ ಹಾಸ್ಟೆಲ್ ಗಳಲ್ಲಿ ನೀಡಲಾಗುತ್ತಿದೆ ಎಂದರು.

RELATED TOPICS:
English summary :Notice to initiate inquiry into women commission complaints within a single day

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...