Sun,May19,2024
ಕನ್ನಡ / English

ಬಾಣಂತಿ ಡಿಸ್ಚಾರ್ಜ್ ಮಾಡಲು 6 ಸಾವಿರ ಫಿಕ್ಸ್, ವಿಡಿಯೋ ವೈರಲ್​, ವೈದ್ಯೆಯರಿಬ್ಬರ ಅಮಾನತು! | JANATA NEWS

26 Nov 2022
2566

ರಾಮನಗರ : ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಬಾಣಂತಿಯನ್ನು ಡಿಸ್ಚಾರ್ಜ್​ ಮಾಡಲು 6 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಡಿಯೋ ವೈರಲ್​ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ರಾಮನಗರದ ಬಿಡದಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದ್ದು, ಬಾಣಂತಿಯನ್ನು ಡಿಸ್ಚಾರ್ಜ್​ ಮಾಡಲು 6 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯೆಯರಿಬ್ಬರನ್ನು ಅಮಾನತು ಮಾಡಲಾಗಿದೆ.

ಬಿಡದಿಯ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ತಜ್ಞೆ ಡಾ. ಶಶಿಕಲಾ ಹಾಗೂ ಡಾ.ಐಶ್ವರ್ಯ ಅವರನ್ನ ಅಮಾನತು ಮಾಡಿ ರಾಮನಗರ ಡಿಎಚ್‌ಒ ಕಾಂತರಾಜ್​ ಆದೇಶ ಹೊರಡಿಸಿದ್ದಾರೆ.

5 ದಿನದ ಹಿಂದೆ ಹೆರಿಗೆಗೆ ರೂಪಾ ಎಂಬುವವರು ದಾಖಲಾಗಿದ್ದರು. ಹೆರಿಗೆಯಾಗಿದ್ದು, ಡಿಸ್ಚಾರ್ಜ್​ ಮಾಡುವಾಗ ವೈದ್ಯೆಯರು 6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಿಡದಿಯ ನಿಂಗೇಗೌಡನ ದೊಡ್ಡಿಯ ಮಂಜಪ್ಪ ಅವರು ಅವರ ಪತ್ನಿಯನ್ನು ಬಿಡದಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಹಣದ ಬೇಡಿಕೆ ಇಟ್ಟಿದ್ದ ವೈದ್ಯರಿಗೆ ಎರಡು ಸಾವಿರ ಹಣ ನೀಡಲು ಹೋಗಿದ್ದಾರೆ.

ಅಷ್ಟೊಂದು ಹಣ ಇಲ್ಲ ಮೇಡಂ, ನನ್ನ ಬಳಿ ಇರೋದೇ 2 ಸಾವಿರ ರೂಪಾಯಿ. ನಾನು ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡೋದು, ಇನ್ನೂ ಸಂಬಳ ಕೂಡ ಆಗಿಲ್ಲ. ಇರೋದು 2 ಸಾವಿರ ಮಾತ್ರ, ಹೆಚ್ಚು ಕೊಡಲು ಆಗಲ್ಲ ಮೇಡಂ ಎಂದು ರೂಪಾ ಅವರ ಪತಿ ಹೇಳಿದ್ದಾರೆ.

ಇದಕ್ಕೆ ಒಪ್ಪದ ವೈದ್ಯೆಯರು, ನೀವು ಕೊಡೋ ಹಣವನ್ನು ನಾವು ಎಲ್ಲರಿಗೂ ಹಂಚಬೇಕು. ಪ್ರತಿಯೊಬ್ಬರಿಗೂ ಎರಡು ಸಾವಿರ ರೂ. ಕೊಡಬೇಕು. ಒಬ್ಬರಿಗೊಂದು ಮತ್ತೊಬ್ಬರಿಗೊಂದು ಮಾಡಲ್ಲ, 6 ಸಾವಿರ ಫಿಕ್ಸ್​. 2 ಸಾವಿರ ಅವರಿಗೆ, 2 ಸಾವಿರ ಇವರಿಗೆ, 2 ಸಾವಿರ ನನಗೆ… ಎಂದು ವೈದ್ಯೆ ಹೇಳಿದ್ದಾರೆ. ನೀವು ಕೊಡೋ 2 ಸಾವಿರದಲ್ಲಿ ಎಲ್ಲರಿಗೂ 500 ಕೊಡೋಕೆ ಆಗುತ್ತಾ? ಆಗಲ್ಲ 6 ಸಾವಿರ ಕೊಡಿ, ನಾವು ಕಮ್ಮಿ ತಗೊಂಡ್ರೆ ವಾರ್ಡ್​ನಲ್ಲಿ ಬೇರೆಯವರಿಗೆ ಗೊತ್ತಾದ್ರೆ ಎಲ್ಲರೂ ಅಷ್ಟೇ ಕೊಡ್ತಾರೆ… ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಿಎಚ್​ಒ, ವೈದ್ಯೆಯರಿಗೆ ನೋಟಿಸ್ ನೀಡಲಾಗಿದೆ. ಲಂಚ ಪಡೆಯುತ್ತಿರುವ ಬಗ್ಗೆ ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಹಾಗಾಗಿ ಇಬ್ಬರನ್ನೂ ಅಮಾನತು ಮಾಡಿದ್ದೇವೆ. ಈ ಬಗ್ಗೆ ಸಂಪೂರ್ಣ ವರದಿ ಸಂಗ್ರಹಿಸಿ ಕ್ರಮ ಕೈಗೊಳ್ಳುತ್ತೇವೆ. ಈ ಪ್ರಕರಣ ಸಂಬಂಧ ಇಬ್ಬರು ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ‌. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

RELATED TOPICS:
English summary :6 thousand fix to discharge Baranti, video viral, suspension of two doctors!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...