Sat,May18,2024
ಕನ್ನಡ / English

ಪರಪುರುಷನ ಜೊತೆ ಅಕ್ರಮ ಸಂಬಂಧ: ಗಂಡನ ಕೊಲೆ ಮಾಡಿ ಚರಂಡಿಗೆ ಶವ ಎಸೆದ ಹೆಂಡ್ತಿ | JANATA NEWS

30 Nov 2022
1797

ಬೆಂಗಳೂರು : ಪರಪುರುಷನ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಮಹಿಳೆಯೊಬ್ಬರು ಪ್ರಿಯಕರನೊಂದಿಗೆ ಪ್ಲಾನ್​​ ಮಾಡಿ ಶವವನ್ನು ಮೋರಿಗೆ ಎಸೆದ ಘಟನೆ ನಡೆದಿದೆ.

ಬೆಂಗಳೂರಿನ ಸೋಮಶೆಟ್ಟಿಹಳ್ಳಿ ನಿವಾಸಿ ದಾಸೇಗೌಡ (48) ಕೊಲೆಯಾದ ವ್ಯಕ್ತಿ. ಈತನ ಪತ್ನಿ ಜಯಲಕ್ಷ್ಮಿ ಮತ್ತು ಈಕೆಯ ಪ್ರಿಯಕರ ರಾಜೇಶ್ ಆರೋಪಿಗಳಾಗಿದ್ದಾರೆ.

ಸೋಲದೇವಹಳ್ಳಿಯ ಠಾಣಾ ವ್ಯಾಪ್ತಿಯ ಫಾರ್ಮ್​​ಹೌಸ್​ವೊಂದರಲ್ಲಿ ದಾಸೇಗೌಡ ಮತ್ತು ಜಯಲಕ್ಷ್ಮಿ ದಂಪತಿ ಕೆಲಸ ಮಾಡುತ್ತಿದ್ದರು. ಇಬ್ಬರಿಗೂ ವಿವಾಹವಾಗಿ 16 ವರ್ಷವಾಗಿದ್ದು, ಇಬ್ಬರು ಮಕ್ಕಳಿದ್ದಾರೆ.

ಜಯಶ್ರೀಗೆ ರಾಜೇಶ್ ಪರಿಚಯವಾಗಿ ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತು‌‌.‌ ಗಂಡ ಮನೆಯಲ್ಲಿ ಇಲ್ಲದಿರುವಾಗ ಆಗಾಗ ರಾಜೇಶ್ ಬಂದು ಹೋಗುತ್ತಿದ್ದ‌. ಈ ವಿಚಾರ ತಿಳಿದು ಗಂಡ ಪತ್ನಿಯೊಂದಿಗೆ ಜಗಳವಾಡಿದ್ದ.‌ ಜಯಶ್ರೀ ಪ್ರಿಯಕರ ರಾಜೇಶ್​ ಬಳಿ ಹೇಳಿಕೊಂಡಿದ್ದಳು. ಇಬ್ಬರು ದಾಸೇಗೌಡನನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದರು.

ಬಳಿಕ ಹಿಂಬಾಗಿಲಿನ ಮೂಲಕ ಮನೆಗೆ ಹೊಕ್ಕಿದ್ದ ಪ್ರಿಯಕರ ದನದ ಕೊಟ್ಟಿಗೆಯಲ್ಲಿನ ಹಗ್ಗ ತಂದು ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ. ಇಬ್ಬರು ಸೇರಿಕೊಂಡು ಬಳಿಕ ಕೈ ಕಾಲುಗಳಿಗೆ ಹಗ್ಗ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ಶವವಿರಿಸಿ ಕಾರಿನಲ್ಲಿ ತೆರಳಿದ್ದಾರೆ.

ಆರೋಪಿಗಳು ಶವವನ್ನು ಕಾರಿನಲ್ಲಿ ಕೊಂಡೊಯ್ದು ಮೈಸೂರು ಬೆಂಗಳೂರು ಹೆದ್ದಾರಿಯ ಮೋರಿಯಲ್ಲಿ ಎಸೆದಿದ್ದರು. ಮೋರಿಯಲ್ಲಿ ಸುಮಾರು 50 ಮೀಟರ್​ನಷ್ಟು ದೂರಕ್ಕೆ ಶವವನ್ನು ತುರುಕಿದ್ದ ಆರೋಪಿಗಳು, ಮೊಬೈಲ್​ಫೋನ್​ನನ್ನು ಅಲ್ಲಿಂದ 500 ಮೀಟರ್​ ದೂರದಲ್ಲಿ ಎಸೆದಿದ್ದರು.

ಬಳಿಕ ಮನೆಗೆ ಬಂದು ಮಾರನೇ ದಿನ ತನ್ನ ಗಂಡ ಕಾಣೆಯಾಗಿದ್ದಾನೆ ಎಂದು ಜಯಶ್ರೀ ದೂರು ನೀಡಿದ್ದಳು. ವಿಚಾರಣೆ ವೇಳೆ ಪ್ರಿಯಕರನನ್ನು ತಮ್ಮ ಎಂದು, ಪ್ರಿಯಕರ ಜಯಲಕ್ಷ್ಮೀಯನ್ನು ಅಕ್ಕ ಎಂದಿದ್ದರು. ಆದರೆ ಪತ್ನಿಯ ಕಾಲ್​ ಡಿಟೇಲ್ಸ್ ತೆಗೆದು ಪರಿಶೀಲನೆ ನಡೆಸಿದಾಗ ಅತಿಹೆಚ್ಚಿನ ಕರೆ ಪ್ರಿಯಕರನಿಗೆ ಹೋಗಿದ್ದು ಗೊತ್ತಾಗಿದ್ದು, ಆ ಬಳಿಕ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಅಸಲಿಯತ್ತು ಹೊರಬಿದ್ದಿದೆ.

RELATED TOPICS:
English summary :Illicit relationship with a man: Woman who killed her husband and threw his body into the drain

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...