ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭೇಟಿ ನೀಡಿ ಪೂಜೆ ಸಲ್ಲಿಸಿದ ಸುದೀಪ್ ದಂಪತಿ | JANATA NEWS

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರಗಳಲ್ಲೊಂದಾದ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದದರಲ್ಲಿ ಭಾಗವಹಿಸಲು ಮಂಗಳೂರಿಗೆ ಪತ್ನಿ ಪ್ರಿಯಾ ಜೊತೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರು, ಇದೇ ವೇಳೆ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ನೆರವೇರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ವತಿಯಿಂದ ಸುದೀಪ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು.
RELATED TOPICS:
English summary :Sudeep couple who visited and offered pooja at Kateelu Sridurgaparameshwari temple