ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು | JANATA NEWS
ಧಾರವಾಡ : ಪ್ರೇಮಿಗಳು ಲಾಡ್ಜ್ ಒಂದರಲ್ಲಿ ನೇಣಿಗೆ ಶರಣಾದ ಘಟನೆ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ.
ಬಸವರಾಜ ತಳವಾರ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ ಯುವಕ ಎಂದು ತಿಳಿದುಬಂದಿದೆ. ಯುವತಿ ಬಗ್ಗೆ ಯಾವುದೇ ಮಾಹಿತಿ ಇನ್ನೂ ಸಿಕ್ಕಿಲ್ಲ.
ಬುಧವಾರ ಮಧ್ಯಾಹ್ನದ ವೇಳೆಗೆ ಇಬ್ಬರೂ ಬಸ್ ನಿಲ್ದಾಣದ ಪಕ್ಕದ ಲಾಡ್ಜ್ಗೆ ತೆರಳಿದ್ದರು. ಅದೇ ದಿನ ಸಂಜೆ ವೇಳೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರೇಮದಲ್ಲಿ ಸಮಸ್ಯೆಯುಂಟಾದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
English summary :Lovers who committed suicide at the lodge