Wed,May08,2024
ಕನ್ನಡ / English

ರಾಜ್ಯದಲ್ಲಿ ಪಕ್ಷ ಕಟ್ಟಿದ ಪ್ರಮುಖರಲ್ಲಿ ನಾನು ಒಬ್ಬ, ನನ್ನನ್ನು ಕಡೆಗಣಿಸುವ ಪ್ರಶ್ನೆಯೇ ಬರುವುದಿಲ್ಲ: ಬಿಎಸ್​ವೈ | JANATA NEWS

15 Dec 2022
2552

ಕೊಪ್ಪಳ : ಬಿಜೆಪಿ ಪಕ್ಷ ಹಗಲು ರಾತ್ರಿ ಕಟ್ಟಿ ಬೆಳೆಸಿದವೆಲ್ಲಿ ನಾನೂ ಒಬ್ಬ, ನನ್ನನ್ನು ಯಾರೂ ಕಡೆಗಣಿಸಿಲ್ಲ. ಹೀಗಾಗಿ ಪಕ್ಷದಲ್ಲಿ ನನ್ನನ್ನು ಕಡೆಗಣಿಸುವ ಪ್ರಶ್ನೆಯೇ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

ಯಡಿಯೂರಪ್ಪ ಅವರನ್ನ ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂಬ ಆರೋಪಗಳಿಗೆ ಸಂಬಂಧಿಸಿ ಮಾತನಾಡಿದ ಅವರು, ನನಗೆ ನನ್ನದೇ ಆದ ಶಕ್ತಿ ಇದೆ, ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ.

ಇಲ್ಲಿ ಯಾರೂ ಯಾರನ್ನೂ ಮುಗಿಸಲು ಆಗಲ್ಲ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರು ತಮ್ಮ ಪಕ್ಷವನ್ನ ನೋಡಿಕೊಳ್ಳಲಿ. ನಮ್ಮ ಬಗ್ಗೆ ಅವರಿಗೇಕೆ ಚಿಂತೆ. ನಮ್ಮ ಪಕ್ಷದಲ್ಲಿ ಎಲ್ಲವೂ ಸರಿಯಿದೆ. ರಾಜ್ಯ ಬಿಜೆಪಿ ನಾಯಕರು ಒಗ್ಗಟ್ಟಾಗಿದ್ದೇವೆ, ಯಾವುದೇ ಗೊಂದಲಗಳಿಲ್ಲ. ನಾನು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇನೆ ಎಂದರು.

ನನ್ನನ್ನು ಈ ಸಮಾವೇಶಕ್ಕೆ ಆಹ್ವಾನ ನೀಡಿಲ್ಲ ಎನ್ನುವಂತಹ ಮಾತಲ್ಲ‌. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಆಗಮಿಸುವ ಹಿನ್ನೆಲೆಯಲ್ಲಿ ನಾನು ಎಲ್ಲ ಕಾರ್ಯಕ್ರಮ ರದ್ದು ಪಡಿಸಿ ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಬಂದಿರುವೆ. ಇಲ್ಲಿ ನನ್ನ ಯಾರೂ ಕಡೆಗಣನೆ ಮಾಡಿಲ್ಲ ಎಂದರು.

ಕೊಪ್ಪಳಕ್ಕೆ ಬಿಜೆಪಿ ರಾಷ್ತ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಆಗಮಿಸುತ್ತಿದ್ದಾರೆ. ಹಾಗಾಗಿ ನಾನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಜೆ ಪಿ ನಡ್ಡಾ ನೇತೃತ್ವದಲ್ಲಿ ಮತ್ತೊಮ್ಮೆ ಕರ್ನಾಟಕದಲ್ಲಿ 150 ಹೆಚ್ಚು ಬಿಜೆಪಿ ಸ್ಥಾನಗಳ ಗೆಲ್ಲಲಿದ್ದು, ಮತ್ತೆ ಸರ್ಕಾರ ರಚನೆ ಮಾಡುವುದು ನಿಶ್ಚಿತ ಎಂದರು.

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವುದೊಂದಿಗೆ ನನ್ನ ಆಸೆಯಾಗಿದೆ. ವಿಜಯೇಂದ್ರ ಎಲ್ಲಿ ಸ್ಪರ್ಧಿಸಬೇಕು ಎನ್ನುವುದು ಪಕ್ಷ ನಿರ್ಧರಿಸುತ್ತದೆ. ಕಾಂಗ್ರೆಸ್ ಪ್ರತ್ಯೇಕ ಯಾತ್ರೆ ಬಗ್ಗೆ ನಾನೇನು ಹೇಳುವುದಿಲ್ಲ, ಅದು ಅವರ ಪಕ್ಷದ ವಿಚಾರ ಎಂದರು.

ಇದೇ ವೇಳೆ ಜನಾರ್ದನ್ ರೆಡ್ಡಿ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ.. ಜನಾರ್ದನ್ ರೆಡ್ಡಿ ನನಗೆ ಸಿಕ್ಕಿದ್ರು ಮಾತನಾಡಿದ್ದೇನೆ. ನಾವೆಲ್ಲ ಮುಖಂಡರು ಮಾತನಾಡಿದ್ದೇವೆ. ರೆಡ್ಡಿ ಬಿಜೆಪಿಯಲ್ಲಿ ಇರ್ತಾರೆ, ನಮ್ಮ ಜೊತಯಲ್ಲೇ ಇರ್ತಾರೆ. , ಅವರು ಮನೆ ಮಾಡಿರೋದಕ್ಕೆ ಗೊಂದಲ ಉಂಟಾಗಿದೆ. ಅವರು ಎಲ್ಲಿ ಸ್ಪರ್ಧೆ ಮಾಡಬೇಕು ಅನ್ನೋದನ್ನ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

RELATED TOPICS:
English summary :I am one of the leaders who built the party in the state, there is no question of ignoring me: BSY

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...