ಹನಿಮೂನ್ಗೆ ತೆರಳಿದ್ದ ವೇಳೆ ದುರಂತ, ಪತಿ ಸಾವನ್ನಪ್ಪಿ, ಪತ್ನಿ ಗಂಭೀರ! | JANATA NEWS

ದಾವಣಗೆರೆ : ಹನಿಮೂನ್ಗೆ ತೆರಳಿದ್ದ ವೇಳೆ ನಡೆದ ದುರಂತದಲ್ಲಿ ಪತಿ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜಿಗಳಿ ಗ್ರಾಮದ ಮಠದ ರಾಜಯ್ಯ ಮತ್ತು ಶೋಭಾ ದಂಪತಿ ಪುತ್ರ ಸಂಜಯ್ (28) ಅಪಘಾತದಲ್ಲಿ ಮೃತಪಟ್ಟ ನವವಿವಾಹಿತ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಸಂಜಯ್, ಕಳೆದ ತಿಂಗಳು ನವೆಂಬರ್ 28ರಂದು ಬೈಲಹೊಂಗಲದ ಪ್ರೀತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮೃತ ಸಂಜಯ್ ಪತ್ನಿ ಪ್ರೀತಿ ಕೂಡ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಾರೆ.
ಸಂಜಯ್ ಮತ್ತು ಪ್ರೀತಿ ಶನಿವಾರ ಜಿಗಳಿಯಿಂದ ಬೈಕ್ನಲ್ಲಿ ಹನಿಮೂನ್ಗೆ ತೆರಳಿದ್ದರು. ಸಿಗಂದೂರು ನೋಡಿಕೊಂಡು ಮುರುಡೇಶ್ವರದಲ್ಲಿಯೇ ರಾತ್ರಿ ತಂಗಿದ್ದಾರೆ. ಭಾನುವಾರ ರ ಬೆಳಗ್ಗೆ ಅಲ್ಲಿಂದ ಶಿರಸಿಗೆ ಬಂದು ಮಾರಿಕಾಂಬಾ ದೇವಿ ದರ್ಶನ ಮಾಡಿಕೊಂಡು ವಾಪಸ್ ಜಿಗಳಿಗೆ ಬರುತ್ತಿದ್ದರು, ಹಿರೇಕೆರೂರು ತಾಲ್ಲೂಕಿನ ಕೋಡದ ಬಳಿ ಕಬ್ಬಿನ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಸಂಜಯ್ ತಲೆಗೆ ತೀವ್ರ ಪೆಟ್ಟಾಗಿದೆ. ಎರಡೂ ಕಿವಿಯಲ್ಲಿ ರಕ್ತಸ್ರಾವವಾಗಿದೆ. ಸಂಜಯ್ ಳದಲ್ಲೇ ಸಾವನ್ನಪ್ಪಿದ್ದ.
ಬೈಕ್‌ನ ಹಿಂಬದಿಯಲ್ಲಿದ್ದ ಪ್ರೀತಿಗೂ ತೀವ್ರ ಗಾಯಗಳಾಗಿವೆ. ಎರಡೂ ಕೈ, ತಲೆಗೆ ಮತ್ತು ಸೊಂಟಕ್ಕೆ ತೀವ್ರ ಪೆಟ್ಟಾಗಿದ್ದು, ಶಸ್ತ್ರ ಚಿಕಿತ್ಸೆ ಮಾಡುವ ಸಾಧ್ಯತೆ ಇದೆ.
ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಸಂಜಯ್ ಮತ್ತು ಪ್ರೀತಿ ಅವರನ್ನು ರಾಣೇಬೆನ್ನೂರು ಆಸ್ಪತ್ರೆಗೆ ದಾಖಲಿಸಿದ್ದರು. ಶವ ಪರೀಕ್ಷೆ ನಂತರ ಸಂಜಯ್ ನೋಡಲು ಪ್ರೀತಿ ಶವಾಗಾರಕ್ಕೆ ಸ್ಟ್ರೆಚರ್ ಮೇಲೆಯೇ ಆಗಮಿಸಿದ್ದರು. ಆ ಕ್ಷಣ ಎಲ್ಲರ ಮನಕಲಕುವಂತಿತ್ತು.. ಆಕ್ರಂದನ ಮುಗಿಲು ಮುಟ್ಟಿತ್ತು.