Tue,Jan31,2023
ಕನ್ನಡ / English

ಜನಸಂಖ್ಯೆ ಆಧಾರಿತವಾಗಿ ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಲು ಸಿಎಂಗೆ ಮನವಿ | JANATA NEWS

23 Dec 2022
421

ಬೆಳಗಾವಿ : ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಬಿಜೆಪಿಯ ಈ ಸಮುದಾಯದ ಎಲ್ಲಾ ಸಚಿವರು ಹಾಗೂ ಶಾಸಕರು ಇಂದು ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ, ಒಕ್ಕಲಿಗರ ಬೇಡಿಕೆಯನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದರು. ಹಿಂದೆ ಈ ಸಂಬಂಧ ಆದಿಚುಂಚನಗಿರಿ ಮಠದ ಶ್ರೀ‌ನಿರ್ಮಲಾನಂದನಾಥ ಸ್ವಾಮೀಜಿ ಅವರು ಕೂಡ ಮನವಿ‌ ಕೊಟ್ಟಿದ್ದಾರೆ. ಹಾಗೆಯೇ ಈಗಲೂ ಒಕ್ಕಲಿಗ ಸಚಿವರು, ಶಾಸಕರು ಮನವಿ ಮಾಡಿದ್ದಾರೆ. ಈ ಎಲ್ಲ ಮನವಿಗಳನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಕಳುಹಿಸಿಕೊಡಲಾಗುವುದು ಎಂದು ಸಚಿವರು ಪ್ರತಿಕ್ರಿಯೆ ನೀಡಿದರು.

ಡಾ.ಕೆ. ಸುಧಾಕರ್ ಮಾತನಾಡಿ, ಒಕ್ಕಲಿಗ ಸಮುದಾಯದ ಒಟ್ಟು ಜನಸಂಖ್ಯೆಗೆ ಹೋಲಿಸಿದರೆ ಶಿಕ್ಷಣ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ನೀಡಿರುವ ಮೀಸಲಾತಿ ಕಡಿಮೆ ಇದೆ. ಇದಕ್ಕಾಗಿ ಮೀಸಲಾತಿ ಹೆಚ್ಚಳಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು. ಒಕ್ಕಲಿಗ ಸಮುದಾಯದ ಜನಸಂಖ್ಯೆಗೆ ಹೋಲಿಸಿದರೆ ಶಿಕ್ಷಣ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ನೀಡಿರುವ ಮೀಸಲಾತಿ ಸಾಲುವುದಿಲ್ಲ.

ಒಕ್ಕಲಿಗರಲ್ಲಿ ಬಹುತೇಕರು ರೈತರಾಗಿದ್ದು, ದೇಶಕ್ಕೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಇದಕ್ಕಾಗಿ ಮೀಸಲಾತಿ ಹೆಚ್ಚಳಕ್ಕೆ ಕ್ರಮ ವಹಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ನಾವು ಹೆಚ್ಚು ಮೀಸಲಾತಿ ಕೇಳಿಲ್ಲ, ಜನಸಂಖ್ಯೆಗೆ ತಕ್ಕಂತೆ ಮಾತ್ರ ನೀಡಲು ಕೋರಲಾಗಿದೆ. ಇಲ್ಲಿ ಯಾವುದೇ ಒತ್ತಡ ಇಲ್ಲ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಎಲ್ಲಾ ಸಮುದಾಯಗಳ ಅಗತ್ಯವೇನು ಎಂಬುದನ್ನು ಅರಿತಿದ್ದಾರೆ. ಅವರು ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡಲಿದ್ದಾರೆ ಎಂದರು. ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ಇನ್ನೂ ನಡೆಯುತ್ತಿದೆ. ನ್ಯಾಯಾಲಯವು ಸಕಾರಾತ್ಮಕ ತೀರ್ಪು ನೀಡಲಿದೆ ಎಂಬ ವಿಶ್ವಾಸವಿದೆ ಎಂದರು.

ಸಚಿವರಾದ ಅರಗ ಜ್ಞಾನೇಂದ್ರ, ಡಾ.ಸುಧಾಕರ, ಎಸ್ ಟಿ ಸೋಮಶೇಖರ್, ನಾರಾಯಣಗೌಡ, ಶಾಸಕರಾದ ಕೃಷ್ಣಪ್ಪ, ಕೆ.ಜೆ.ಭೋಪಯ್ಯ, ಸುಕುಮಾರ ಶೆಟ್ಟಿ, ಡಾ.ರಾಜೇಶ ಗೌಡ, ಮಸಾಲೆ ಜಯರಾಂ, ರಾಜೇಶ ನಾಯ್ಕ, ತುಳಸಿ ಮುನಿರಾಜು, ಸತೀಶ ರೆಡ್ಡಿ, ಪ್ರಾಣೇಶ್, ವೈ.ಎ. ನಾರಾಯಣಸ್ವಾಮಿ, ಸೋಮಶೇಖರ ರೆಡ್ಡಿ, ಸಂಜೀವ ಮಟಂದೂರು, ಎಲ್ ನಾಗೇಂದ್ರ, ಭಾರತಿ ಶೆಟ್ಟಿ, ಅ.ದೇವೇಗೌಡ, ಪುಟ್ಟಣ್ಣ, ಚಿದಾನಂದ ಗೌಡ, ಎಸ್ ಆರ್ ವಿಶ್ವನಾಥ ಮತ್ತಿತರರು ಸಭೆಯಲ್ಲಿ ಇದ್ದರು.

RELATED TOPICS:
English summary :Appeal to CM to increase reservation for Okkaligars based on population

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...