ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಲಾರಿ, ಓರ್ವ ವಿದ್ಯಾರ್ಥಿನಿ ಸಾವು | JANATA NEWS
ಶಿವಮೊಗ್ಗ : ಜಲ್ಲಿ ತುಂಬಿದ್ದ ಟಿಪ್ಪರ್ ಡಿಕ್ಕಿಯಾಗಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಸಣ್ಣಮನೆ ಸೇತುವೆ ಬಳಿ ನಡೆದಿದೆ.
ಶಿಕಾರಿಪುರ ತಾಲೂಕಿನ ಚಿಕ್ಕಯಲವಟ್ಟಿ ಗ್ರಾಮದ ಪ್ರತಿಮಾ (18) ಮೃತ ವಿದ್ಯಾರ್ಥಿನಿ. ಘಟನೆಯಲ್ಲಿ ಅಂಕಿತಾ, ಐಶ್ವರ್ಯ ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಪ್ರತಿಮಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಶಿಕಾರಿಪುರದ ಚಿಕ್ಕಲವತ್ತಿಯ ಅಂಕಿತಾ, ಸೊರಬದ ಪುಕ್ಕನಹಳ್ಳಿಯ ಐಶ್ವರ್ಯ ಗಂಭೀರವಾಗಿ ಗಾಯಗೊಂಡು ಸಾಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂವರು ವಿದ್ಯಾರ್ಥಿನಿಯರು ಸಾಗರದಲ್ಲಿನ ಹಾಸ್ಟೆಲ್ನಿಂದ ಸರ್ಕಾರಿ ಕಾಲೇಜಿಗೆ ನಡೆದು ಹೋಗುತ್ತಿದ್ದಾಗ ಹಿಂದೆನಿಂದ ಜಲ್ಲಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದೆ.
ಚಾಲಕನ ಅಜಾಗರೂಕತೆ, ಅತಿವೇಗವೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.