ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂದು ಸ್ಮಶಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ | JANATA NEWS

ಧಾರವಾಡ : ಮದುವೆಗೆ ಹೆಣ್ಣು ಸಿಕ್ಕಿಲ್ಲ ಎಂದು ಮನನೊಂದ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ.
ಯುವಕನನ್ನು ಸಂತೋಷ ಕೊರಡಿ (30) ಎಂದು ಗುರುತಿಸಲಾಗಿದೆ. ತನಗೆ ವಯಸ್ಸಾದರೂ ಮದುವೆಗೆ ಕನ್ಯೆ ಸಿಗಲಿಲ್ಲವೆಂದು ಯುವಕ ನೊಂದಿದ್ದನು.
ವಯಸ್ಸಾದರೂ ನನಗೆ ಮದುವೆಯಾಗಿಲ್ಲ ಎಂದು ಮನನೊಂದ ಈತ, ನನಗೆ ಯಾರೂ ಹೆಣ್ಣು ಕೊಡತ್ತಿಲ್ಲ ಎಂದು ಮನಸ್ಸಿಗೆ ಹಚ್ಚಿಕೊಂಡು ಈ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಆಗ ಮನೆಯವರು ಸಂತೋಷನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು.
ಗ್ರಾಮದ ಸ್ಮಶಾನದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಯುವಕನನ್ನು ಗಮನಿಸಿದ ಸ್ಥಳೀಯರು ಆತನನ್ನು ರಕ್ಷಣೆ ಮಾಡಿದ್ದಾರೆ. ಸಂತೋಷನ ದೇಹಕ್ಕೆ ತೀವ್ರ ಸುಟ್ಟ ಗಾಯಗಳಾಗಿದ್ದರಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.