Tue,Sep26,2023
ಕನ್ನಡ / English

ನಂದಿನಿ ಕನ್ನಡಿಗರ ಜೀವನಾಡಿ, ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತೆ: ಎಚ್‌ಡಿ ಕುಮಾರಸ್ವಾಮಿ | JANATA NEWS

01 Jan 2023
1009

ಬೆಂಗಳೂರು : ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಶುಕ್ರವಾರ ಮಂಡ್ಯದ ಗೆಜ್ಜಲಗೆರೆ ಡೈರಿ ಆವರಣದಲ್ಲಿ ಮೆಗಾ ಡೈರಿ ಉದ್ಘಾಟಿಸಿ, ಮಾತನಾಡಿದ್ದ ಅವರು, ನಂದಿನಿ ಮತ್ತು ಅಮೂಲ್ ವಿಲೀನದ ಬಗ್ಗೆ ಪ್ರಸ್ತಾಪವಿಟ್ಟಿದ್ದರು.

ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಎಚ್​ಡಿಕೆ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ ಬ್ಯಾಂಕ್​ಗಳಿಗೆ ಅಡಿಯಾಳನ್ನಾಗಿಸಿ, ಹಿಂದಿ ಭಾಷಿಗರ ಉದ್ಧಾರಕ್ಕಾಗಿ ಕನ್ನಡಿಗರ ಅನ್ನ ಕಸಿದುಕೊಂಡ ಬಿಜೆಪಿ, ಇದೀಗ ನಂದಿನಿಯನ್ನು ಹೊಡೆದುಕೊಂಡು ಹೋಗಲು ಹಿಡನ್ ಅಜೆಂಡಾ ರೂಪಿಸಿದಂತಿದೆ. ಕರ್ನಾಟಕ ಎಂದಿಗೂ ಗುಜರಾತಿನ ವಸಾಹತು ಆಗುವುದಿಲ್ಲ ಎಂದು ಸರಣಿ ಟ್ವೀಟ್​ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

"ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಕೇಂದ್ರ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ" ಎಂದು ಕಿಡಿ ಕಾರಿದ್ದಾರೆ.

"ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟ ವ್ಯಕ್ತಿ, ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಕಿವಿ ಹಿಂಡದ ವ್ಯಕ್ತಿ ಈಗ ಕನ್ನಡ ನೆಲದ ಮಣ್ಣಿನಮಕ್ಕಳ ಜೀವನಾಡಿ ಕರ್ನಾಟಕ ಹಾಲು ಮಹಾ ಮಂಡಳಿ (KMF- ನಂದಿನಿ) ಯನ್ನು ಗುಜರಾತಿನ ಅಮುಲ್ ನಲ್ಲಿ ವಿಲೀನ ಮಾಡುವ ಹೇಳಿಕೆ ನೀಡಿರುವುದು ಕನ್ನಡಿಗರಿಗೆ ಮಾಡಲು ಹೊರಟಿರುವ ಘೋರ ಅನ್ಯಾಯ" ಎಂದು ಪ್ರತಿಭಟಿಸಿದ್ದಾರೆ.

"ಕರ್ನಾಟಕ ರಾಜ್ಯವನ್ನು ಗುಜರಾತ್ ಮಾಡುವ ಧೂರ್ತ ಹುನ್ನಾರ ಇದು. ಅಷ್ಟೇ ಅಲ್ಲ, ಗುಜರಾತ್ ಗೆ ಕರ್ನಾಟಕವೇ ಪ್ರತಿಸ್ಪರ್ಧಿ ಎನ್ನುವ ಕಾರಣಕ್ಕೆ ಅಭಿವೃದ್ಧಿಯಲ್ಲಿ ಕರ್ನಾಟಕವನ್ನು ಮುಗಿಸೇಬೀಡಬೇಕು ಎನ್ನುವ ದುರಾಲೋಚನೆ ಅಮಿತ್ ಶಾ ಅವರಿಗೆ ಸ್ಪಷ್ಟವಾಗಿ ಇದ್ದಂತಿದೆ" ಎಂದಿದ್ದಾರೆ.

"ದೇಶದ ಬೇರಾವ ರಾಜ್ಯದ ಮೇಲೆಯೂ ಇಲ್ಲದ ಅಸಹನೆ, ಅಸೂಯೆ, ವೈಷಮ್ಯ ಕರ್ನಾಟಕದ ಮೇಲೇಕೆ ಅಮಿತ್ ಶಾ ಅವರೇ ಎಂದು ನಾನು ಕೇಳುತ್ತಿದ್ದೇನೆ. ಕನ್ನಡಿಗರನ್ನು ಶತ್ರುಗಳಂತೆ ನೋಡುತ್ತಿದ್ದಾರೆ. ಕನ್ನಡಿಗರನ್ನು ಗುಜರಾತಿನ ಗುಲಾಮರನ್ನಾಗಿ ಮಾಡಲು ಶಾ ಅವರು ಷಡ್ಯಂತ್ರ ರೂಪಿಸಿದ್ದಾರೆ ಎನ್ನುವುದು ನನ್ನ ಅನುಮಾನ" ಎಂದು ಆರೋಪಿಸಿದ್ದಾರೆ.

"ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ. ಇಡೀ ದೇಶವನ್ನೇ ಆಳಿದ ಕನ್ನಡಿಗರು ಯಾರೊಬ್ಬರ ಗುಲಾಮರಲ್ಲ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕೆ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು. ಬಿಜೆಪಿಯ ಬ್ರಹ್ಮರಾಕ್ಷಸ ರೂಪ ಕನ್ನಡಿಗರಿಗೆ ಈಗ ಅರಿವಾಗುತ್ತಿದೆ" ಎಂದು ಎಚ್ಚರಿಕೆ ನೀಡಿದ್ದಾರೆ.

"ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ ಬ್ಯಾಂಕ್‌ಗಳಿಗೆ ಅಡಿಯಾಳನ್ನಾಗಿಸಿ, ಹಿಂದಿ ಭಾಷಿಗರ ಉದ್ಧಾರಕ್ಕಾಗಿ ಕನ್ನಡಿಗರ ಅನ್ನ ಕಸಿದುಕೊಂಡ ಕೇಂದ್ರ ಬಿಜೆಪಿ ಈಗ, ನಂದಿನಿಯನ್ನು ಹೊಡೆದುಕೊಂಡು ಹೋಗಲು ಹಿಡನ್ ಅಜೆಂಡಾ ರೂಪಿಸಿದಂತಿದೆ. ಕರ್ನಾಟಕ ಎಂದಿಗೂ ಗುಜರಾತಿನ ವಸಾಹತು ಆಗುವುದಿಲ್ಲ" ಎಂದು ಆಕ್ರೋಶ ಹೊರಹಾಕಿದ್ದಾರೆ.

ಅಮುಲ್ ಜತೆ ನಂದಿನಿ ವಿಲೀನ ಸಾಧ್ಯವಿಲ್ಲ. ನಮ್ಮ ರೈತರ ಅನ್ನ ಕಸಿಯುವ ಕೆಲಸವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೆಎಂಎಫ್ ಕನ್ನಡಿಗರ ಜೀವನಾಡಿ ಮಾತ್ರವಲ್ಲ, ಸಮಸ್ತ ಕನ್ನಡಿಗರ ಆಸ್ತಿ ಮತ್ತು ಅಸ್ಮಿತೆ. ಅಮಿತ್ ಶಾ ಅವರು ಇದೆಲ್ಲವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಎಚ್ಚರಿಕೆ ನೀಡಿದ್ದಾರೆ.

RELATED TOPICS:
English summary :Nandini is the lifeline of Kannadigas, BJP will burn if it comes to its knees: HD Kumaraswamy

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...