ಹೊಸ ವರ್ಷದ ಪಾರ್ಟಿಯಿಂದ ತೆರಳುವಾಗ ಕಾರು ಅಪಘಾತ: ನಾಲ್ವರು ಸಾವು, ಓರ್ವನ ಸ್ಥಿತಿ ಗಂಭೀರ | JANATA NEWS

ಉತ್ತರ ಕನ್ನಡ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ನಡೆದಿದೆ.
ಮೃತರನ್ನು ತಮಿಳುನಾಡು ಮೂಲದವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವವರನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾದಲ್ಲಿ ಹೊಸ ವರ್ಷದ ಆಚರಣೆ ಮುಗಿಸಿಕೊಂಡು ತಮಿಳುನಾಡಿಗೆ ವಾಪಸಾಗುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ತದಡಿ ಹುಬ್ಬಳ್ಳಿ ಬಸ್ ಗೆ ಡಿಕ್ಕಿಯಾಗಿದೆ.
ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಓರ್ವ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.