Mon,May13,2024
ಕನ್ನಡ / English

ನನ್ನ ಪಕ್ಷವನ್ನು ಕೆಣಿಕಿದ್ದೀರಿ, ನಿಮ್ಮ ರಾಜಕಾರಣ ಉತ್ತರ ಭಾರತದಲ್ಲಿ ಇಟ್ಕೊಳ್ಳಿ, ಕರ್ನಾಟಕದಲ್ಲಿ ಅಲ್ಲ | JANATA NEWS

02 Jan 2023
2185

ಮೈಸೂರು : ಕೇಂದ್ರ ಸಚಿವ ಅಮಿತ್ ಶಾ ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ನಡೆದ ಸಮಾವೇಶದಲ್ಲಿ ಜೆಡಿಎಸ್ ಕುರಿತು ಮಾಡಿರುವ ಟೀಕೆಗಳಿಗೆ ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಪಕ್ಷವನ್ನು ಕೆಣಿಕಿದ್ದೀರಿ, ನಿಮ್ಮ ರಾಜಕಾರಣ ಉತ್ತರ ಭಾರತದಲ್ಲಿ ಇಟ್ಕೊಳ್ಳಿ, ಕರ್ನಾಟಕದಲ್ಲಿ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯದ ಸಭೆಯಲ್ಲಿ ರಾಜ್ಯ ನಮ್ಮ‌ ಕುಟುಂಬದ ಎಟಿಎಂ ಎಂದಿದ್ದಾರೆ. ಯಾವುದಾದರೂ ಪ್ರಕರಣದಲ್ಲಿ ದೇವೇಗೌಡ ಅವ್ರು ಪಿಎಂ ಆಗಿದ್ದಾಗ, ನಾನು ಸಿಎಂ ಆಗಿದ್ದಾಗ ಸರ್ಕಾರದ ಖಜಾನೆ ಲೂಟಿ ಮಾಡಿದ್ರೆ, ಒಂದೇ ಪ್ರಕರಣ ತೋರಿಸಲಿ. ಈಗ ಬಿಜೆಪಿ ಲೂಟಿ ಮಾಡುತ್ತಿರೋದು ಎಲ್ಲರಿಗೂ ಗೊತ್ತಿದೆ ಅಂತ ಕಿಡಿಕಾರಿದ್ದಾರೆ.

ಹೊಂದಾಣಿಕೆ ಮಾಡಿಕೊಳ್ಳಲು ನಾನು ಬಿಜೆಪಿಯವರ ಮನೆ ಬಾಗಿಲಿಗೆ ಹೋಗಿಲ್ಲ. ನಾನು ಅಮಿತ್ ಶಾ ಮನೆಗೆ ಹೋಗಿದ್ದೀನಾ. ಹೊಂದಾಣಿಕೆ ಬಗ್ಗೆ ಯಾಕೆ ಮಾತನಾಡ್ತೀರಿ. ನಾನು ಪಂಚರತ್ನ ಯಾತ್ರೆ ಮಾಡ್ತಿರೋದು ಯಾರ ಮನೆ ಬಾಗಿಲಿಗೂ ಹೋಗಲು ಅಲ್ಲ. ಮಾರ್ಚ್ 20 ರವರೆಗೆ ಪಂಚರತ್ನ ಯಾತ್ರೆ ಮಾಡಲಿದ್ದೇನೆ. ಜೆಡಿಎಸ್ ನಿಶ್ಚಿತವಾಗಿ ಅಧಿಕಾರಕ್ಕೆ ಬರಲಿದೆ ಅಂತ ಹೇಳಿದ್ದಾರೆ.

ಉತ್ತರ ಭಾರತದ ರಾಜಕೀಯ ಕರ್ನಾಟಕದಲ್ಲಿ ನಡೆಯುವುದಿಲ್ಲ. ನಮ್ಮನ್ನು ಬ್ಲಾಕ್ ಮೇಲ್ ಮಾಡುತ್ತಾರೆ ಎಂದು ಹೇಳಿರುವ ಅಮಿತ್ ಶಾರಿಗೆ ಮುಂದಿನ ಚುನಾವಣೆಯಲ್ಲಿ ಬುದ್ದಿ ಕಲಿಸುತ್ತೇನೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಶಾ ವಿರುದ್ಧ ಏಕ ವಚನದಲ್ಲೇ ವಾಗ್ದಾಳಿ ನಡೆಸಿ,”ಅಮಿತ್ ಶಾ ದೇವೇಗೌಡರ ಉಗುರಿಗೂ ಸಮರಲ್ಲ” ಎಂದು ಕಿಡಿ ಕಾರಿದರು.

ದೇಶದಲ್ಲಿ‌ 800 ಕ್ಕೂ ಹೆಚ್ಚು ಶಾಸಕರನ್ನು ಖರೀದಿ ಮಾಡಿರುವ ಇತಿಹಾಸ ಇದ್ರೇ ಅದು ಬಿಜೆಪಿಯದ್ದು. ಚುನಾವಣೆಗೂ ಮುನ್ನವೇ ಆಪರೇಷನ್ ಕಮಲ ಮಾಡಿದೆ. ಸಾಮರ್ಥ್ಯ ಇಲ್ಲದ ಕಡೆ ಖರೀದಿ ಮಾಡಲು ಈಗಾಗಲೇ ಬಿಜೆಪಿ ಹುನ್ನಾರ ನಡೆಸುತ್ತಿದೆ ಎಂದು ಕಿಡಿಕಾರಿದರು.

ಮಂಡ್ಯದಲ್ಲಿ ನಡೆದ ಬಿಜೆಪಿ ಸಮಾವೇಶಕ್ಕೆ ಹಣಕೊಟ್ಟು ಜನರನ್ನು ಕರೆದುಕೊಂಡು ಬಂದಿದ್ದರು. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಮೇಲುಗೈ ಸಾಧಿಸಲು ಸಾಧ್ಯವಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬರುವುದಿಲ್ಲ. ನಾನು ಚಾಲೆಂಜ್ ಮಾಡಿ ಹೇಳುತ್ತೀನಿ, ಮುಂದಿನ ಚುನಾವಣೆಯಲ್ಲಿ ಕನ್ನಡಿಗರ ಪಕ್ಷ ಜೆಡಿಎಸ್ ಬಹುಮತ ಪಡೆಯಲಿದೆ ಎಂದರು

RELATED TOPICS:
English summary :You have insulted my party, keep your politics in North India, not in Karnataka

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...