ಅನ್ಯ ಕೋಮಿನ ಯುವತಿಯೊಂದಿಗೆ ತಿರುಗಾಡುತ್ತಿದ್ದ ಯುವಕನ ಮೇಲೆ ತೀವ್ರ ಹಲ್ಲೆ | JANATA NEWS

ಮಂಗಳೂರು : ಯುವತಿಯೊಂದಿಗೆ ತಿರುಗಾಡುತ್ತಿದ್ದ ಅನ್ಯಕೋಮಿನ ಯುವಕನ ಮೇಲೆ 10 ಮಂದಿಯ ಗ್ಯಾಂಗ್ವೊಂದು ತೀವ್ರ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕ ಕಲ್ಲುಗುಂಡಿಯ ಅಫೀದ್ ಎಂದು ತಿಳಿದು ಬಂದಿದ್ದು, ಸದ್ಯ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿನಿಯೊಂದಿಗೆ ತಿರುಗಾಡುತ್ತಿದ್ದ ಬಗ್ಗೆ ಮಾಹಿತಿಯಿದ್ದು, ಕುಕ್ಕೆ ಸುಬ್ರಹ್ಮಣ್ಯ ಬಸ್ಸ್ಟ್ಯಾಂಡ್ನಲ್ಲಿ ಈ ಜೋಡಿ ಕಂಡು ಬಂದಿದೆ.
ಬಳಿಕ ಕುಮಾರಧಾರ ಬಳಿ ಬಂದಾಗ ಗುಂಪೊಂದು ಯುವಕನಿಗೆ ಥಳಿಸಿದ್ದಾರೆ. ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದು, ಆಕೆಯ ತಂದೆಯಿಂದಲೂ ಪೊಲೀಸ್ ದೂರು ನೀಡಲಾಗಿದ್ದು, ಯುವಕನ ವಿರುದ್ದ ಸುಬ್ರಹ್ಮಣ್ಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಾಗಿದೆ.