ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದ ಬಿರಿಯಾನಿ ಸೇವಿಸಿ ಯುವತಿ ಸಾವು | JANATA NEWS

ಕಾಸರಗೋಡು : ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದ ಬಿರಿಯಾನಿ ಸೇವಿಸಿದ ಬಳಿಕ ಯುವತಿ ಸಾವನ್ನಪ್ಪಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ.
ಮೃತ ಯುವತಿಯನ್ನು ಕಾಸರಗೋಡಿನ ಥಲಕ್ಲೇ ಮೂಲದ ಅಂಜುಶ್ರೀ ಪಾರ್ವತಿ ಎಂದು ಗುರುತಿಸಲಾಗಿದೆ. 20 ವರ್ಷದ ಯುವತಿ ಡಿ.31 ರಂದು ಸ್ಥಳೀಯ ರೆಸ್ಟೋರೆಂಟ್ ವೊಂದರಿಂದ ಕುಝಿಮಂತಿ ಬಿರಿಯಾನಿ( ಕೇರಳದಲ್ಲಿ ಜನಪ್ರಿಯ ಬಿರಿಯಾನಿ) ಯನ್ನು ಆನ್ಲೈನ್ ಮೂಲಕ ತರಿಸಿಕೊಂಡಿದ್ದಳು.
ಬಿರಿಯಾನಿ ಸೇವಿಸಿದ ಬಳಿಕ ಯುವತಿಯ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು, ಶನಿವಾರ ಮುಂಜಾನೆ ಯುವತಿ ಮೃತಪಟ್ಟಿದ್ದಾಳೆ ಎಂದು ಮೂಲಗಳಿಂದ ತಿಳಿದು ಬಂದದಿದೆ.
ಘಟನೆ ಸಂಬಂಧ ಯುವತಿಯ ಪೋಷಕರು ದೂರು ನೀಡಿದ್ದಾರೆ ಎನ್ನಲಾಗಿದೆ.