Tue,Jan31,2023
ಕನ್ನಡ / English

ಪತಿಯ ಜತೆ ಸೇರಿ‌ ಪ್ರಿಯಕರನ ಹತ್ಯೆ, ಶವದೊಂದಿಗೆ ಬೈಕ್​​ನಲ್ಲಿ ಥ್ರಿಬಲ್​ ರೈಡ್ | JANATA NEWS

08 Jan 2023
422

ಬೆಂಗಳೂರು : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನು ಮುಗಿಸಲು ಮಹಿಳೆ ಪ್ಲ್ಯಾನ್ ಮಾಡಿದ್ದಳು, ಆದರೆ ಪ್ರಿಯಕರನೇ ಕೊಲೆಯಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ರೀನಾ ಹಾಗೂ ಗಂಗೇಶ್ ದಂಪತಿ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ವಾಸವಿದ್ದರು. ಗಂಗೇಶ್ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದರೆ, ರೀನಾ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದಳು. ಈ ನಡುವೆ ಕೊರಿಯರ್ ಡಿಲವರಿ ಮಾಡುತ್ತಿದ್ದ ಅಸ್ಸಾಂ ಮೂಲದ ನಿಬಾಶಿಸ್ ಪಾಲ್ ಮತ್ತು ರೀನಾ ಪರಿಚಯವಾಗಿ ಬಳಿಕ ದೈಹಿಕ ಸಂಬಂಧಕ್ಕೆ ತಿರುಗಿತ್ತು.

ಇಬ್ಬರು ಒಂದಾಗಲು ಗಂಡನನ್ನೇ ಕೊಲೆ ಮಾಡಲು ರೀನಾ ಸ್ಕೆಚ್​ ಸಿದ್ದಪಡಿಸಿದ್ದಳಂತೆ. ಆದರೆ ಈ ವಿಚಾರ ತಿಳಿದ ಪತಿ ಗಂಗೇಶ್, ತನ್ನ ಪತ್ನಿಯನ್ನು ನಗರದಲ್ಲೇ ಬಿಟ್ಟು ಉತ್ತರ ಪ್ರದೇಶ ಸ್ವಗ್ರಾಮಕ್ಕೆ ತೆರಳಿದ್ದ. ಇಷ್ಟೇ ಸಾಕು ಅಂದುಕೊಂಡಿದ್ದ ರೀನಾ, ಪ್ರಿಯಕರನೊಂದಿಗೆ ಸುತ್ತಾಡಿಕೊಂಡಿದ್ದಳು.

ಆದರೆ ಕೆಲ ದಿನಗಳ ಬಳಿಕ ತನ್ನ ನೈಜ ಮುಖ ತೋರಿಸಿದ್ದ ಪ್ರಿಯಕರ, ರೀನಾಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಲು ಶುರು ಮಾಡಿದ್ದನಂತೆ. ಅಲ್ಲದೇ ಬೇರೆ ಪುರುಷರೊಂದಿಗೆ ಮಲಗಿಕೊಳ್ಳವಂತೆ ಒತ್ತಾಯ ಮಾಡುತ್ತಿದ್ದನಂತೆ.

ಪ್ರಿಯಕರನ ಹಿಂಸೆ ತಾಳಲಾಗದೆ, ಮತ್ತೆ ಗಂಡನ ಪಾದವೇ ಮೇಲು ಎಂದುಕೊಂಡಿದ್ದ ರೀನಾ, ಗಂಗೇಶ್​ಗೆ ಕರೆ ಮಾಡಿ ತನಗೆ ಆಗುತ್ತಿದ್ದ ಹಿಂಸೆಗಳನ್ನು ಹೇಳಿಕೊಂಡಿದ್ದಳಂತೆ. ಅಲ್ಲದೇ ಇದೊಂದು ಬಾರಿ ನನ್ನದು ತಪ್ಪಾಗಿದೆ, ದಯವಿಟ್ಟು ಕ್ಷಮಿಸಿ ಬಿಡಿ ಅಂತ ಕೇಳಿಕೊಂಡಿದ್ದಾಳೆ.

ಡಿ. 3ರಂದು ಆರೋಪಿಗಳು ನಿಭಾಶಿಸ್​​ನ ಕತ್ತು ಬಿಗಿದು ಕೊಲೆಗೈದಿದ್ದರು. ಸುಮಾರು 3 ರಿಂದ 4 ಗಂಟೆ ಕಾಲ ಬೈಕ್​ ಮೇಲೆ ಮೃತದೇಹವನ್ನು ಇಟ್ಟುಕೊಂಡು ಸೂಕ್ತ ಸ್ಥಳಕ್ಕಾಗಿ ಹುಡುಕಾಟ ನಡೆಸಿದ್ದರು. ಆದರೆ ಯಾವುದೇ ಸ್ಥಳ ಸಿಗದ ಕಾರಣ ತಮಿಳುನಾಡಿನ ಹೊಸೂರು ಮಾರ್ಗಕ್ಕೆ ತೆರಳಿ ನಿರ್ಜನ ಪ್ರದೇಶವೊಂದರಲ್ಲಿ ಮೃತದೇಹ ಎಸೆದು ಬಂದಿದ್ದರು.ಆರೋಪಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ತನಿಖೆ ಕೈಗೊಂಡಾಗ ಆರೋಪಿಗಳ ಕೃತ್ಯ ಬಯಲಾಗಿದೆ.

RELATED TOPICS:
English summary :Murder of lover along with husband, triple ride on bike with dead body

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...