Tue,Jan31,2023
ಕನ್ನಡ / English

ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಗುಂಡಿನ ದಾಳಿ, ಮೂವರ ಬಂಧನ | JANATA NEWS

08 Jan 2023
391

ಬೆಳಗಾವಿ : ಶ್ರೀರಾಮ ಸೇನೆ ಬೆಳಗಾವಿ ಅಧ್ಯಕ್ಷ ರವಿ ಕೋಕಿತ್ಕರ್ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದು 24 ಗಂಟೆಯೊಳಗೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಅಭಿಜಿತ್ ಭಾತ್ಕಂಡೆ, ರಾಹುಲ್ ಕೊಡಚವಾಡ, ಜ್ಯೋತಿಬಾ ಗಂಗಾರಾಮ್​ ಎಂದು ಗುರುತಿಸಲಾಗಿದೆ. ರವಿ ಹತ್ಯೆಗೆ ಸುಫಾರಿ ನೀಡಿದ ಆರೋಪಿ ಸೇರಿ ಮೂವರನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ತಿಳಿಸಿದ್ದಾರೆ.

ಶನಿವಾರ ಸಂಜೆ ರವಿ ಕೋಕಿತ್ಕರ್ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಹಿಂಡಲಗಾ ಗ್ರಾಮದ ಬಳಿ ಅವರ ಮೇಲೆ ರಾತ್ರಿ ಬೈಕ್ ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. ರವಿ ಕೋಕಿತ್ಕರ್ ಪ್ರಸ್ತುತ ಶ್ರೀರಾಮ ಸೇನೆಯ ಬೆಳಗಾವಿ ಜಿಲ್ಲಾ ಘಟಕದ ಮುಖ್ಯಸ್ಥರಾಗಿದ್ದಾರೆ.

ಹಿಂಡಲಗಾ ಗ್ರಾಮದ ಬಳಿ ರೋಡ್ ಹಂಪ್ ನಲ್ಲಿ ಕಾರು ನಿಧಾನ ಮಾಡಿದಾಗ ಅಪರಿಚಿತರು ಗುಂಡು ಹಾರಿಸಿದ್ದರು. ಗುಂಡು ರವಿ ಗದ್ದಕ್ಕೆ ತಗುಲಿ ನಂತರ ಚಾಲಕನ ಕೈಗೆ ತಗುಲಿತ್ತು. ದಾಳಿಯಲ್ಲಿ ರವಿ ಕೋಕಿತಕರ್ ಹಾಗೂ ಕಾರು ಚಾಲಕ ಮನೋಜ್ ದೇಸೂರಕರ್ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

RELATED TOPICS:
English summary :Sri Ram Sena District President shot at, three arrested

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...