ಗುಂಡಿನ ದಾಳಿ: ಯುವಕ ಸಾವು, ಮತ್ತಿಬ್ಬರು ಗಂಭೀರ | JANATA NEWS

ಹಾಸನ : ಮೀನು ಹಿಡಿಯಲು ಹೋಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಾರ್ಯಕರ್ತ ಸೇರಿದಂತೆ ಮೂವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ತಂಬಲಗೇರಿ ಗ್ರಾಮದಲ್ಲಿ ನಡೆದಿದೆ.
ನವೀನ್(39) ಮೃತ ಯುವಕ ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ತಂಬಲಗೇರಿ ಗ್ರಾಮದ ನವೀನ್ (39) ಮೃತಪಟ್ಟ ಆರ್ ಎಸ್ ಎಸ್ ಕಾರ್ಯಕರ್ತರಾಗಿದ್ದಾರೆ.
ಸೋಮವಾರ ಸಂಜೆ ಮೃತ ನವೀನ್ ಹಾಗೂ ಆತನ ಸ್ನೇಹಿತರಾದ ದಯಾನಂದ, ಪದ್ಮನಾಭ್, ರಾಜಾಚಾರಿ ತಂಬಲಗೇರಿ ಗ್ರಾಮದಲ್ಲಿ ಮೀನು ಹಿಡಿಯಲು ತೆರಳಿದ್ದರು.
ಈ ವೇಳೆ ಅಪರಿಚಿತರ ತಂಡ ಗುಂಡಿನ ದಾಳಿ ನಡೆಸಿದ್ದು, ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ದಯಾನಂದ ಹಾಗೂ ಪದ್ಮನಾಭ ಅವರು ಗಂಭೀರವಾಗಿ ಗಾಯಗೊಂಡು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.