ಸ್ಯಾಂಟ್ರೋ ರವಿ ವಿರುದ್ಧ ಉನ್ನತ ಮಟ್ಟದ ತನಿಕೆ ನಡೆಸುವಂತೆ ಕಾಂಗ್ರೆಸ್ನಿಂದ ರಾಜ್ಯಪಾಲರಿಗೆ ದೂರು | JANATA NEWS

ಬೆಂಗಳೂರು : ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಂತ ಸ್ಯಾಂಟ್ರೋ ರವಿ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು ಸಲ್ಲಿಸಿದೆ.
ರಾಜ್ಯ ಕಾಂಗ್ರೆಸ್ ನಾಯಕರು ಸ್ಯಾಂಟ್ರೋ ರವಿಯ ಅಕ್ರಮದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ದೂರು ನೀಡಿದ್ದಾರೆ.
ಸ್ಯಾಂಟ್ರೋ ರವಿ ವಿರುದ್ಧ ಭ್ರಷ್ಟಾಚಾರ ಹಾಗೂ ಅನೈತಿಕ ವ್ಯವಹಾರ ಪ್ರಕರಣಗಳಿವೆ. ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮತ್ತು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದನು. ಹಾಗೇ ಸರ್ಕಾರಿ ಬಂಗಲೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದನು. ಹೀಗಾಗಿ ಸ್ಯಾಂಟ್ರೋ ರವಿ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ.
RELATED TOPICS:
English summary :Congress complains to the Governor for a high-level investigation against Santro Ravi