ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವು | JANATA NEWS
ಶಿವಮೊಗ್ಗ : ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಆನವಟ್ಟಿ ಜೂನಿಯರ್ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ಬಾಲಕ. ಇಂದು ಬೆಳಗ್ಗೆ ಮನೆಯಲ್ಲಿ ಶಾಲೆಗೆ ರೆಡಿಯಾಗುವ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡ ಈತನನ್ನು ಕೂಡಲೇ ಎಣ್ಣೆಕೊಪ್ಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು.
ಇನ್ನು ಈ ಸಂಬಂಧ ಸೊರಬ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
English summary :An SSLC student died of a heart attack