ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ | JANATA NEWS

ಬೆಂಗಳೂರು : ಜನಾರ್ದನ ರೆಡ್ಡಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ರೆಡ್ಡಿ ಅವರ ಅಕ್ರಮ ಆಸ್ತಿ ಜಪ್ತಿಗೆ ಅನುಮತಿ ನೀಡಲಾಗಿದೆ.
ಅಕ್ರಮ ಗಣಿಗಾರಿಕೆಯಿಂದ ಬಂದ ಹಣದಲ್ಲಿ ಆಸ್ತಿ ಸಂಪಾದನೆ ಸಂಬಂಧ ಆಸ್ತಿಗಳ ಗುರುತಿಸಿ ಜಪ್ತಿ ಮಾಡಲು ಈ ಹಿಂದೆಯೇ ರಾಜ್ಯ ಸರ್ಕಾರದ ಅನುಮತಿಗಾಗಿ ಸಿಬಿಐ ಮನವಿ ಮಾಡಿತ್ತು. ಆದರೆ ಸರ್ಕಾರ ಅನುಮತಿ ಕೊಟ್ಟಿರಲಿಲ್ಲ.
ಗಾಲಿ ಜನಾರ್ದನ ರೆಡ್ಡಿಗೆ ಸೇರಿದ 19 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ. ಹಾಗಾಗಿ ಸಿಬಿಐ ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸುತ್ತಿದ್ದಂತೆ, ಜನಾರ್ದನ ರೆಡ್ಡಿಗೆ ಸೇರಿದ ಆಸ್ತಿಗಳ ಜಪ್ತಿಗೆ ಸರ್ಕಾರ ಅಸ್ತು ಎಂದಿದೆ.
RELATED TOPICS:
English summary :State Govt gives permission to confiscate property of Janardhan Reddy