ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ, ಹರಕೆಯ ಕುರಿಯಾಗಲಿದ್ದಾರೆ | JANATA NEWS
ಕಲಬುರಗಿ : ಕೋಲಾರ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಸೇಫ್ ಕ್ಷೇತ್ರವಲ್ಲ. ಒಂದು ವೇಳೆ ಅವರು ಅಲ್ಲಿಂದ ಸ್ಪರ್ಧೆ ಮಾಡಿದರೆ, ಹರಕೆಯ ಕುರಿಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕಡಣಿ ಗ್ರಾಮದಲ್ಲಿ ಮಾತನಾಡಿ, ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ನಿಲ್ಲುವಂತೆ ಯಾರು ಒತ್ತಡ ಹಾಕಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಕೋಲಾರದಲ್ಲಿ ನಿಲ್ಲಿಸುವ ಮೂಲಕ ಅವರ ಪಕ್ಷದವರೇ ಅವರನ್ನು ಹರಕೆಯ ಕುರಿ ಮಾಡಲು ಹೊರಟಿದ್ದಾರೆ ಎಂದರು.
ನಾನು ಸ್ವತಃ ಕೋಲಾರದಲ್ಲಿ ಸುತ್ತಾಡಿ, ಅಲ್ಲಿಯ ಜನರ ಭಾವನೆ ಅರಿತುಕೊಂಡಿದ್ದೇನೆ. ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಲಿ ಅಥವಾ ನಾಯಕರಿಗಾಗಲಿ ಮತ ಪಡೆಯುವ ಶಕ್ತಿ ಇಲ್ಲ. ಸಿದ್ದರಾಮಯ್ಯ ಅವರನ್ನು ಬಲವಂತವಾಗಿ ನಿಲ್ಲಿಸಲು ಹೊರಟಿದ್ದಾರೆ ಎಂದರು.
RELATED TOPICS:
English summary :If Siddaramaiah contests from Kolar, he will be the sheep of the flock