ಸಚಿವ ಶ್ರೀರಾಮುಲು, ಕೈಲಾಸ್ ವ್ಯಾಸ್ ಒಡೆತನದ ಫ್ಯಾಕ್ಟರಿ ಮೇಲೆ ಐಟಿ ದಾಳಿ | JANATA NEWS

ಬೆಂಗಳೂರು : ಸಾರಿಗೆ ಸಚಿವ ಶ್ರೀರಾಮುಲು ಹಾಗೂ ಮಾಜಿ ಶಾಸಕ ಸುರೇಶ್ ಬಾಬು ಪಾಲುದಾರ ಕೈಲಾಸ್ ವ್ಯಾಸ್ ಫ್ಯಾಕ್ಟರಿ ಮೇಲೆ ಐಟಿ ದಾಳಿ ನಡೆದಿದೆ.
ಬೆಂಗಳೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರು, ಚೆನ್ನೈನಿಂದ ಆಗಮಿಸಿದ್ದ 30 ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಸಾರಿಗೆ ಸಚಿವ ಶ್ರೀರಾಮುಲು ಪಾಲುದಾರ ಕೈಗಾರಿಕೋದ್ಯಮಿ ಕೈಲಾಸ್ ವ್ಯಾಸ್ ಫ್ಲ್ಯಾಟ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿಯ ವಿದ್ಯಾನಗರದ ರಾಗಾಸ್ ಪೋರ್ಟ್ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಫ್ಲ್ಯಾಟ್ ನಂಬರ್ 310, 510 ರಮೇಲೆ ದಾಳಿ ನಡೆಸಲಾಗಿದ್ದು, ಕೈಲಾಸ್ ವ್ಯಾಸ್ ಪಾಲುದಾರಿಕೆಯ ಕಂಪನಿಗಳ ಮೇಲೂ ಐಟಿ ದಾಳಿ ನಡೆದಿದೆ.
ಸಚಿವ ಶ್ರೀರಾಮುಲು ಹಾಗೂ ಕೈಗಾರಿಕಾ ಉದ್ಯಮಿ ಕೈಲಾಸ್ ವ್ಯಾಸ್ ಸೇರಿ ಖರೀದಿಸಿರುವ ನೂರಾರು ಕೋಟಿ ಬೆಲೆ ಬಾಳುವ ಫ್ಯಾಕ್ಟರಿ ಖರೀದಿಯ ಹಣದ ಮೂಲದ ಬಗ್ಗೆ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಸಚಿವ ಶ್ರೀರಾಮುಲು ಮಾಜಿ ಶಾಸಕ ಸುರೇಶ್ ಬಾಬು ಹಾಗೂ ಲಾಡ್ ಕುಟುಂಬದ ಪ್ಲಾಂಟ್ ಗಳನ್ನು ಕೈಗಾರಿಕಾ ಉದ್ಯಮಿ ಕೈಲಾಸ್ ವ್ಯಾಸ್ ಬಾಡಿಗೆ ಹಾಗೂ ಲೀಜ್ ಮೇಲೆ ನಡೆಸುತ್ತಿದ್ದರು. ಈ ಕೈಗಾರಿಕೆಗಳು ತೆರಿಗೆ ವಂಚನೆ ಮಾಡಿದ ಆರೋಪದ ಐಟಿ ದಾಳಿಯಾಗಿದೆ.