ಯುವತಿಯೋರ್ವಳನನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಕೊಲೆ | JANATA NEWS

ಕೊಡಗು : ಯುವತಿಯೋರ್ವಳನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ನಾಂಗಲದಲ್ಲಿ ನಡೆದಿದೆ.
24 ವರ್ಷದ ಬುಟ್ಟಿಯಂಡ ಆರತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಯುವತಿಯ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಅದೇ ಊರಿನ ತಿಮ್ಮಯ್ಯ ಎಂಬಾತನೆ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಕೃತ್ಯ ನಡೆದ ಸ್ಥಳದಿಂದ ಕೆಲವೇ ದೂರದಲ್ಲಿರುವ ಕೆರೆಯ ಬಳಿ ಆತನ ಚಪ್ಪಲಿ, ಹೆಲ್ಮೆಟ್ ಪತ್ತೆಯಾಗಿದ್ದು ತಿಮ್ಮಯ್ಯನಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
English summary :Murder of a young woman