ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಪೋಟಗೊಂಡು ಕಾರ್ಮಿಕ ಸಾವು | JANATA NEWS

ಮಂಗಳೂರು : ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಪೋಟಗೊಂಡು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು ಸಾವನ್ನಪ್ಪಿದ್ದಾರೆ
ಟಯರ್ ರಿಸೋಲ್ ಮಾಡುತ್ತಿದ್ದಾಗ ಏಕಾಏಕಿ ಏರ್ ಕಂಪ್ರೆಸರ್ ಸ್ಫೋಟವಾಗಿದೆ. ಇದರಿಂದ ತೀವ್ರವಾಗಿ ಗಾಯೊಂಡಿದ್ದ ರಾಜೇಶ್ ಪೂಜಾರಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಕಾರ್ಮಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Air compressor explodes in tire shop, worker dies