Sun,Oct26,2025
ಕನ್ನಡ / English

ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಹೃದಯಾಘಾತದಿಂದ ಸಾವು | JANATA NEWS

21 Jan 2023

ಸಿಂದಗಿ : ಸಿಂದಗಿ ವಿಧಾನಸಭಾ ಕ್ಷೇತ್ರದಿಂದ ಮುಂದಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದ ಶಿವಾನಂದ ಪಾಟೀಲ ಶುಕ್ರವಾರ ತಡರಾತ್ರಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

ಸಂತಾಪ ವ್ಯಕ್ತಪಡಿಸಿದ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಸಿಂದಗಿ ವಿಧಾನಸಭೆ ಕ್ಷೇತ್ರದ ಜಾತ್ಯತೀತ ಜನತಾ ದಳ ಪಕ್ಷದ ಅಭ್ಯರ್ಥಿ ಶ್ರೀ ಶಿವಾನಂದ ಪಾಟೀಲ ಅವರ ಅಕಾಲಿಕ ಮರಣ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಜ.18ರಂದು ಇಡೀ ದಿನ ಅವರು ನನ್ನೊಂದಿಗೆ ಸಿಂದಗಿ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಮರುದಿನ ಯಾತ್ರೆಯೊಂದಿಗೆ ನನ್ನನ್ನು ಆತ್ಮೀಯವಾಗಿ ದೇವರ ಹಿಪ್ಪರಗಿ ಕ್ಷೇತ್ರಕ್ಕೆ ಬೀಳ್ಕೊಟ್ಟಿದ್ದರು. ನಿನ್ನೆ ಮಧ್ಯಾಹ್ನವೂ ಮತ್ತೆ ನಾಗಠಾಣ ಕ್ಷೇತ್ರದ ಯಾತ್ರೆಯಲ್ಲಿ ಭಾಗವಹಿಸಿದ್ದರು.

ಸೇನೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತಿ ಪಡೆದಿದ್ದ ಶ್ರೀ ಪಾಟೀಲರು, ಸಮಾಜ ಸೇವೆಯ ಅದಮ್ಯ ಹಂಬಲ ಹೊಂದಿದ್ದರು. ಅತ್ಯುತ್ತಮ ಸಂಘಟನಾ ಶಕ್ತಿ, ಕ್ರಿಯಾಶೀಲತೆ ಹೊಂದಿದ್ದ ಅವರು ಪರಿಚಯವಾದ ಅಲ್ಪಕಾಲದಲ್ಲಿಯೇ ನನಗೆ ಅತ್ಯಂತ ಆತ್ಮೀಯರಾಗಿದ್ದರು.

ಶ್ರೀ ಶಿವಾನಂದ ಪಾಟೀಲರ ಅಗಲಿಕೆ ನನಗೆ ವೈಯಕ್ತಿಕವಾಗಿ ಅತೀವ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ, ಎಂದು ಟ್ವೀಟ್ ಮಾಡಿದ್ದಾರೆ.

English summary :Sindagi Assembly Constituency JDS candidate Sivananda Patil dies of heart attack

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...