ಭೀಕರ ಅಪಘಾತ, ಮಹಿಳೆಯ ತಲೆ ಮೇಲೆ ಹರಿದ ಬಸ್ | JANATA NEWS

ಬೆಂಗಳೂರು : ಖಾಸಗಿ ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಭೀಕರ ಘಟನೆ ಯಶವಂತಪುರದಲ್ಲಿರುವ ಗೋವರ್ಧನ ಚಿತ್ರಮಂದಿರದ ಮುಂಭಾಗದಲ್ಲಿನಡೆದಿದೆ.
ಮೃತ ಮಹಿಳೆಯನ್ನು ವಿನುತಾ (32) ಎಂದು ಗುರುತಿಸಲಾಗಿದೆ. ವಿನುತಾ ಸಂಜಯ ನಗರದ ನಿವಾಸಿಯಾಗಿದ್ದು, ಕಾಮಾಕ್ಷಿಪಾಳ್ಯದ ಕಚೇರಿಯೊಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡಿಕೊಂಡಿದ್ದರು. ದ್ವಿಚಕ್ರ ವಾಹನದಲ್ಲಿ ವಿನುತಾ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ದ್ವಿಚಕ್ರ ವಾಹನಕ್ಕೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ವಿನುತಾ ಅವರು ಕೆಳಕ್ಕೆ ಬಿದ್ದಿದ್ದರು. ಈ ವೇಳೆ ವಿನುತಾ ಅವರ ತಲೆಯ ಮೇಲೆ ಬಸ್ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಯಶವಂತಪುರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
English summary :A terrible accident, the bus fell on the woman head