ದೇಶದ್ರೋಹ ಆರೋಪ : ಪಾಕಿಸ್ತಾನದ ಪಿಟಿಐ ನಾಯಕ, ಮಾಜಿ ಮಾಹಿತಿ ಸಚಿವ ಫವಾದ್ ಚೌಧರಿ ಬಂಧನ | JANATA NEWS

ಇಸ್ಲಾಮಾಬಾದ್ : ಪಾಕಿಸ್ತಾನದ ರಾಜಕೀಯ ಪಕ್ಷ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ನಾಯಕ ಮತ್ತು ಪಾಕಿಸ್ತಾನದ ಮಾಜಿ ಮಾಹಿತಿ ಸಚಿವ ಫವಾದ್ ಚೌಧರಿ ಅವರನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಲಾಗಿದೆ.
ದೇಶದ ಮಾಜಿ ಪ್ರಧಾನಿ ಮತ್ತು ಪಿಟಿಐ ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಬಂಧಿಸಲು ಸಂಚು ರೂಪಿಸಿದ್ದಕ್ಕಾಗಿ ಪಾಕಿಸ್ತಾನ ಸರ್ಕಾರವನ್ನು ಫವಾದ್ ಚೌಧರಿ ಸಾರ್ವಜನಿಕವಾಗಿ ಟೀಕಿಸಿದ ಬೆನ್ನಲ್ಲೇ ಈ ಬಂಧನ ನಡೆದಿದೆ.
ಫವಾದ್ ಚೌಧರಿ ಅವರನ್ನು ಬುಧವಾರ ನಸುಕಿನ ವೇಳೆ ಲಾಹೋರ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಚೌಧರಿ ಅವರನ್ನು ಅವರ ನಿವಾಸದಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪಕ್ಷದ ನಾಯಕ ಫರೂಖ್ ಹಬೀಬ್ ಡಾನ್‌ಗೆ ತಿಳಿಸಿದ್ದಾರೆ.
English summary :Sedition charges: Pakistan PTI leader, former information minister Fawad Chaudhary arrested