74ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು | JANATA NEWS

ನವದೆಹಲಿ : ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ 74ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೇರವೇರಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್ ಸಿಸಿ ಇದ್ದರು.
ನವದೆಹಲಿಯಲ್ಲಿ ತ್ರಿವರ್ಣ ಧ್ವಜದ ಅನಾವರಣವನ್ನು ರಾಷ್ಟ್ರಗೀತೆ ಮತ್ತು ಸಾಂಪ್ರದಾಯಿಕ 21 ಗನ್ ಸೆಲ್ಯೂಟ್ ಅನುಸರಿಸಲಾಯಿತು. ಈ ವೇಳೆ ಭಾರತೀಯ ಸೇನಾ ಪಡೆಯು ರಾಷ್ಟ್ರಪತಿಗಳಿಗೆ ಗೌರವ ವಂದನೆ ಸಲ್ಲಿಸಿತು.
ಪ್ರಧಾನಿ ನರೇಂದ್ರ ಮೋದಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿಗೆ ಆಗಮಿಸಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಗೌರವ ಸಲ್ಲಿಸಿದರು. ಕರ್ತವ್ಯ ಪಥಕ್ಕೆ ಆಗಮಿಸಿದ ರಾಷ್ಟ್ರಪತಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಬರಮಾಡಿಕೊಂಡರು.