ಜೈಲಿನಲ್ಲಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನ, ಬಿಜೆಪಿ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆ, ಕಾಂಗ್ರೆಸ್ ಟೀಕೆ! | JANATA NEWS

ಬೆಂಗಳೂರು : ಜೈಲಿನಲ್ಲಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ, ಬಿಜೆಪಿ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಸ್ಯಾಂಟ್ರೋ ರವಿಯೊಳಗೆ ಅಡಗಿದ್ದ ಬಿಜೆಪಿಗರ ಭಯಂಕರ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆಯೇ ಸರ್ಕಾರ? ಸಿಐಡಿ ಕಸ್ಟಡಿಯಲ್ಲಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾನಂತೆ. ಇದು ಆತ್ಮಹತ್ಯೆ ಯತ್ನವೋ, ಕೊಲೆ ಯತ್ನವೋ? ಸ್ಯಾಂಟ್ರೋ ರವಿಯನ್ನು ಮುಗಿಸುವ ಮೂಲಕ ಸರ್ಕಾರದ ರಹಸ್ಯಗಳನ್ನೂ ಮುಗಿಸುವ ಹುನ್ನಾರ ನಡೆದಿದೆಯೇ ಬೊಮ್ಮಾಯಿ ಅವರೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಪೊಲೀಸ್ ಕಸ್ಟಡಿಯಲ್ಲಿ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಸುದ್ದಿ ಬರುತ್ತಿದೆ. ಆರಗ ಜ್ಞಾನೇಂದ್ರ ಅವರೇ, ಕಸ್ಟಡಿಯಲ್ಲಿರುವ ಆರೋಪಿಗೆ ರಕ್ಷಣೆ ನೀಡಲು ಸಾಧ್ಯವಾಗದಿರುವುದು ನಿಮ್ಮ ವೈಫಲ್ಯವೇ ಅಥವಾ ಷಡ್ಯಂತ್ರವೇ? ಆತನ ಜೊತೆಗಿರುವ ತಮ್ಮ ವ್ಯವಹಾರಗಳನ್ನು ಮುಚ್ಚಿಕೊಳ್ಳಲು ದಾರಿ ಹುಡುಕುತ್ತಿದ್ದೀರಾ ಎಂದು ಗಂಭೀರ ಆರೋಪ ಮಾಡಿದೆ.
ಸ್ಯಾಂಟ್ರೋ ರವಿಯೊಳಗೆ ಅಡಗಿದ್ದ ಬಿಜೆಪಿಗರ ಭಯಂಕರ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆಯೇ ಸರ್ಕಾರ?
— Karnataka Congress (@INCKarnataka) January 27, 2023
ಸಿಐಡಿ ಕಸ್ಟಡಿಯಲ್ಲಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾನಂತೆ.
ಇದು ಆತ್ಮಹತ್ಯೆ ಯತ್ನವೋ, ಕೊಲೆ ಯತ್ನವೋ?
ಸ್ಯಾಂಟ್ರೋ ರವಿಯನ್ನು ಮುಗಿಸುವ ಮೂಲಕ ಸರ್ಕಾರದ ರಹಸ್ಯಗಳನ್ನೂ ಮುಗಿಸುವ ಹುನ್ನಾರ ನಡೆದಿದೆಯೇ @BSBommai ಅವರೇ?