Sun,May19,2024
ಕನ್ನಡ / English

ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ! | JANATA NEWS

30 Jan 2023
1753

ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೊಷ್ಟಿ ನಡೆಸಿ ಮಾತನಾಡಿ, ಬೆಳಗಾವಿ ಗ್ರಾಮೀಣ ಶಾಸಕಿಯಿಂದ ಶಿವಕುಮಾರ್ ಮತ್ತು ನನ್ನ ಸಂಬಂಧ ಹಾಳಾಗಿದೆ. ಕಾಂಗ್ರೆಸ್ ನಾಶಕ್ಕೆ ಕಾರಣ ಡಿಕೆ ಶಿವಕುಮಾರ್ ಕಂಪನಿ ಹಾಗು ವಿಷಕನ್ಯೆ ಎಂದು ಪರೋಕ್ಷವಾಗಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕಿಡಿ ಕಾರಿದರು.

ನನ್ನ ಸಿಡಿ‌ ಪ್ರಕರಣದಲ್ಲಿ ‌ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮರ್, ಉದ್ಯಮಿ‌ ಪರಶಿವಮೂರ್ತಿ, ನರೇಶ, ಶ್ರವಣ, ಡಿ.ಕೆ. ಶಿವಕುಮಾರ್ ವಾಹನ ಚಾಲಕ ಹಾಗೂ ಮಂಡ್ಯ ಮೂಲದ ಇಬ್ಬರು ಪ್ರಮುಖ ಆರೋಪಿಗಳನ್ನು ‌ಕೂಡಲೇ ಬಂಧಿಸಬೇಕು ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಆಗ್ರಹಿಸಿದರು.

ಸಿಡಿ ಪ್ರಕರಣದಲ್ಲಿ ನನ್ನ ಬಳಿ ಸಾಕಷ್ಟು ಸಾಕ್ಷಿಗಳಿವೆ.‌ ಡಿ.ಕೆ.‌ಶಿವಕುಮಾರ್ ಅವರೇ ಸಿಡಿ‌ ಪ್ರಕರಣದ ಸೂತ್ರದಾರ. ಈ ಕುರಿತು ಕೂಡಲೇ ಆಡಿಯೋ ಬಿಡುಗಡೆ ಮಾಡಿತ್ತೇನೆ. ಈ ವಿಷಯದಲ್ಲಿ ನಾನು ಯಾರಿಗೂ ಹೆದರುವ ವ್ಯಕ್ತಿ ನಾನಲ್ಲ. ಇದನ್ನು ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರದ‌ ಮೂಲಕ ಶಿಫಾರಸ್ಸು ಮಾಡುತ್ತೇನೆ ಎಂದರು.

ಸುಮಾರು ಒಂದು ವರ್ಷದಿಂದ ಸುಮ್ಮನೆ ಕುಳಿತಿದ್ದೆ.‌ ಮಿಸ್ಟರ್ ಶಿವಕುಮಾರ್ ರಾಜಕೀಯ ಮಾಡಲು ನಾಲಾಯಕ್. ಒಬ್ಬ ವ್ಯಕ್ತಿ ಜೀವನ ಹಾಳು ಮಾಡಿ ರಾಜಕೀಯ ಮಾಡುವ ಡಿಕೆ ಶಿವಕುಮಾರ್ ರಾಜಕೀಯ ಮಾಡಲು ಅಯೋಗ್ಯ ವ್ಯಕ್ತಿ. ನಾನು ವೈಯಕ್ತಿಕ ಯಾರನ್ನು ದ್ವೇಷ ಮಾಡುವುದಿಲ್ಲ. ನಾನು ಯಾವುದೇ ಸಿಡಿ ರಿಲೀಜ್ ಮಾಡಲ್ಲ.

ಜಾರಕಿಹೊಳಿ ಯಾವುದೇ ಗಾಳಿಯಲ್ಲಿ ಗುಂಡು ಹಾರಿಸಲ್ಲ. ಡಿಕೆ ಶಿವಕುಮಾರ್ ಒಬ್ಬ ಮಹಿಳೆ ಮುಖಾಂತರ ನನ್ನ ಜೀವನ ಹಾಳು ಮಾಡಿದ್ದಾರೆ. ಶಿವಕುಮಾರ್ ಅವರ ಆಡಿಯೋ ಝಲಕ್ ತೋರಿಸುತ್ತೇನೆ. ಸಿಡಿ ರಿಲೀಜ್ ಮಾಡುವುದಿಲ್ಲ. ಡಿ.ಕೆ.‌ ಶಿವಕುಮಾರ ಸಾವಿರಾರು ಕೋಟಿ ಮಾಲೀಕ. ಸಿಡಿ ಲೇಡಿ ಹಾಗೂ ಅವರಿಗೆ ಸಹಕರಿಸಿದ ಎಲ್ಲರನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.

ಷಡ್ಯಂತ್ರದ ಮೂಲಕ ರಾಜಕಾರಣ ಹಾಳು ಮಾಡುವ ಮತ್ತು ನನ್ನ ರಾಜಕೀಯ ಜೀವನ ಮುಗಿಸಲು ಪ್ರಯತ್ನಿಸಿರುವ ಡಿ.ಕೆ.ಶಿವಕುಮಾರ್​ ಅವರನ್ನು ರಾಜಕೀಯವಾಗಿ ಮುಗಿಸಿ, ಬಂಧಿಸದ ಬಳಿಕವೇ ರಾಜಕೀಯ ದಿಂದ ನಿವೃತ್ತಿ ಆಗುತ್ತಾನೆ ಎಂದು ಘೋಷಿಸಿದರು.

ನಾನು ಸಹಕಾರಿ ಸಚಿವನಾಗಿದ್ದಾಗ ಶಾಂತಿನಗರ ಸಹಕಾರ ಕೊ-ಅಪರೇಟೀವ್ ಸೊಸೈಟಿಯಲ್ಲಿ 10 ಸಾವಿರ ಕೋಟಿ ವ್ಯವಹಾರ ನಡೆದಿತ್ತು. 66 ಎಕರೆಗೆ ಸಂಬಂಧಿಸಿದ್ದಾಗಿತ್ತು. ಈ ವೇಳೆ ಡಿಕೆ ಶಿವಕುಮಾರ್ ನನಗೆ ಫೈಲ್ ಕ್ಲೀಯರ್ ಮಾಡಬೇಕು ಎಂದು ಗಂಟುಬಿದ್ದಿದ್ದ. ಅಲ್ಲಿಂದ ನಮ್ಮಿಬ್ಬರ ಮಧ್ಯೆ ವೈಮನಸ್ಸು ಶುರುವಾಯಿತು ಎಂದರು.

RELATED TOPICS:
English summary :D.K.Shivakumar and Vishakanye are the reason for the ruin of Congress party

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...