Sat,May18,2024
ಕನ್ನಡ / English

ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್ | JANATA NEWS

30 Jan 2023
1609

ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಶಾಸಕ ಆಗಿದ್ದ ವಾಸು ಅವರ ಪುತ್ರ ಕವೀಶ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಶಾಸಕನ ಮನೆಯಲ್ಲಿ ಬಿಜೆಪಿ ಚಿಂತನೆ ಅರಳಿದೆ. ನಾಳೆ ಸಿದ್ದರಾಮಯ್ಯ ಅವರ ಮಗ, ಡಿಕೆ ಶಿವಕುಮಾರ್ ಅವರ ಕುಟುಂಬ ಕೂಡಾ ಬಿಜೆಪಿಗೆ ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕಾಂಗ್ರೆಸ್ ಯುವ ಮುಖಂಡ ಕವೀಶ್‍ಗೌಡ ವಾಸು, ಜೆಡಿಎಸ್ ತಾಲೂಕು ಘಟಕದ ಮಾಜಿ ಅಧ್ಯಕ್ಷ ಸೋಮಶೇಖರ್, ಕಾಂಗ್ರೆಸ್ ಮಾಜಿ ಪದಾಧಿಕಾರಿ ವೆಂಕಟೇಶ್, ರೈತ ಸಂಘಟನೆ ಜಿಲ್ಲಾಧ್ಯಕ್ಷ ದಿವಾಕರ್ ಗೌಡ, ಕಾಂಗ್ರೆಸ್ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ವಿ. ರಾಜಪ್ಪ, ಜೆಡಿಎಸ್ ಪರಾಜಿತ ಅಭ್ಯರ್ಥಿ ಗಿರೀಶ್ ನಾಶಿ, ಪುಣ್ಯ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕಿ ಡಾ ಪುಣ್ಯವತಿ ನಾಗರಾಜ್ ಇಂದು ಬಿಜೆಪಿ ಸೇರಿದರು.

ಕಾಂಗ್ರೆಸ್ ಮತ್ತು ಜೆಡಿಎಸ್​ನಿಂದ ಬಂದ ಮುಖಂಡರು ಮತ್ತು ಬೆಂಬಲಿಗರನ್ನು ಪಕ್ಷದ ಶಾಲು ಹೊದಿಸಿ ಧ್ವಜ ನೀಡಿ ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.

ರಾಜ್ಯ ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕಾಂಗ್ರೆಸ್ ನವರ ಬಸ್ ಹೊರಟಿದೆ. ಹೋಗ್ತಾ, ಹೋಗ್ತಾ ಬ್ರೇಕ್ ಫೇಲ್ ಆಗಲಿದೆ. ಜೆಡಿಎಸ್ ಪಂಚರತ್ನ ಯಾತ್ರೆಯೂ ಪಂಕ್ಚರ್ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವ್ಯಂಗ್ಯವಾಡಿದರು.

ಬಿಜೆಪಿ ಸಂಕಲ್ಪ ಯಾತ್ರೆ ವಿಜಯಿ ಯಾತ್ರೆಯಾಗಿ ಪರಿವರ್ತನೆ ಹೊಂದುತ್ತಿದೆ. ಬಿಜೆಪಿ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆದ್ದೇಗೆಲ್ಲಲಿದೆ. ಈ ಬದಲಾವಣೆ ಕೇವಲ ವಾಸು ಅವರ ಮನೆಯಲ್ಲಿ ಆಗಿಲ್ಲ. ಒಬ್ಬ ಕಾಂಗ್ರೆಸ್ ಶಾಸಕನ ಮನೆಯಲ್ಲಿ ಅವರ ಮಗ ಬಿಜೆಪಿ ಸೇರಿದಂತೆ, ಮುಂದಿನ ದಿನದಲ್ಲಿ ಸಿದ್ರಾಮಣ್ಣನ ಮಗನೂ, ಡಿಕೆಶಿ ಮನೆಯಿಂದಲೂ ಬಿಜೆಪಿಗೆ ಬರುತ್ತಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಮತ್ತೆ ಡಬಲ್ ಎಂಜಿನ್ ಸರ್ಕಾರ ಅಭಿವೃದ್ಧಿಯ ಕೆಲಸ ಮಾಡಲಿದೆ ಎಂದು ತಿಳಿಸಿದರು.

ಬಿಜೆಪಿ ಮನೆತನ ಅಥವಾ ಕುಟುಂಬ ರಾಜಕಾರಣ ಮಾಡುವುದಿಲ್ಲ. ಇದರಿಂದಾಗಿ ಚಹಾ ಮಾರುವವರು ದೇಶದ ಪ್ರಧಾನಿಯಾಗುತ್ತಾರೆ. ಹಳ್ಳಿಗಳಲ್ಲಿ ಪಕ್ಷದ ಭಿತ್ತಿ ಪತ್ರ ಅಂಟಿಸಿದವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗುತ್ತಾರೆ. ಕುಟುಂಬ, ಪರಿವಾರ ವಾದಕ್ಕೆ ರೋಸಿ ಹೋದವರು ರಾಷ್ಟ್ರೀಯ ವಾದದ ಪಕ್ಷಕ್ಕೆ ಸೇರಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದರು.

RELATED TOPICS:
English summary :Not only Siddaramaiah son, DK family will also join BJP: Nalin Kumar Kateel

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...