ಪ್ರೀತಿಸಿದ ಯುವತಿ ಮೋಸ ಮಾಡಿದಳೆಂದು ಮನನೊಂದ ಯುವಕ ಆತ್ಮಹತ್ಯೆ | JANATA NEWS

ಹಾಸನ : ಪ್ರೀತಿಸಿದ ಯುವತಿ ಮೋಸ ಮಾಡಿದಳೆಂದು ಮನನೊಂದ ಯುವಕ ಚೆನ್ನೈನ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹಾಸನ ನಗರದ ಸಂಗಮೇಶ್ವರ ಬಡಾವಣೆಯ ಕಾರ್ತಿಕ್(26) ಮೃತ ಯುವಕ. ಕಾರ್ತಿಕ್ ಹಾಸನದ ಪ್ರತಿಷ್ಠಿತ ಹೋಟೆಲ್ನಲ್ಲಿ ರಿಸೆಪ್ಷನಿಷ್ಟ್ ಆಗಿ ಕೆಲಸ ಮಾಡುತ್ತಿದ್ದ.
ಕಳೆದ ನಾಲ್ಕು ವರ್ಷಗಳಿಂದ ಕಾರ್ತಿಕ್ ಹೊಳೆನರಸೀಪುರ ತಾಲೂಕಿನ ಯುವತಿಯನ್ನು ಪ್ರೀತಿಸುತ್ತಿದ್ದ. ಜನವರಿ 27 ರಂದು ತಾನು ಚೆನ್ನೈಲಿದ್ದು ಅಲ್ಲಿಗೇ ಬರುವಂತೆ ಆತನ ಪ್ರೇಯಸಿ ಕರೆದಿದ್ದಳು. ಆಕೆಯ ಮಾತು ನಂಬಿ ಕಾರ್ತಿಕ್ ಚೆನ್ನೈಗೆ ಹೋಗಿದ್ದ. ಹೋದ ಬಳಿಕ ತಾನು ಹಾಸನದಲ್ಲೇ ಇರುವುದಾಗಿ ಹೇಳಿದ್ದಾಳೆ.
ಯುವತಿ ತನಗೆ ಮೋಸ ಮಾಡಿದ್ದಾಳೆಂದು ಮನನೊಂದು ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದಾನೆ. ಯುವತಿ ತಮ್ಮ ಮಗನನ್ನು ನಂಬಿಸಿ ಮೋಸ ಮಾಡಿದ್ದಾಳೆ ಎಂದು ಯುವಕನ ಕುಟುಂಬಸ್ಥರು ಆರೋಪ ಮಾಡಿದ್ದಾರೆ.