ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5300 ಕೋಟಿ ಅನುದಾನ, ಸಂತಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ | JANATA NEWS

ಬೆಂಗಳೂರು : ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5300 ಕೋಟಿ ಅನುದಾನ ಒದಗಿಸಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂತಸ ವ್ಯಕ್ತಪಡಿಸಿದ್ದಾರೆ.
ವಿತ್ತ ಸಚಿವೆಯಾಗಿ ಇಂದು 5ನೇ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಭದ್ರಾ ಮೇಲ್ದಂಡೆ ಯೋಜನೆಗೆ 5,630 ಕೋಟಿ ರೂ. ಅನುದಾನ ಮೀಸಲು ಇಟ್ಟಿರುವುದಾಗಿ ಘೋಷಣೆ ಮಾಡಿದರು.
ಭದ್ರಾ ಮೇಲ್ದಂಡೆ ಯೋಜನೆಯು ಭದ್ರಾ ಜಲಾಶಯದ ನೀರನ್ನು ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಕೃಷಿ ಭೂಮಿಗೆ ನೀರು ಒದಗಿಸುವ ಯೋಜನೆ ಇದಾಗಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು ಎಂದು ಹೇಳಿದ್ದಾರೆ.