ಶರಾವತಿ ಸಂತ್ರಸ್ತರಿಗೆ ಜಮೀನು ಹಕ್ಕುಪತ್ರ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಬಿ.ಎಸ್ ಯಡಿಯೂರಪ್ಪ | JANATA NEWS

ಬೆಂಗಳೂರು : ಶರಾವತಿ ಯೋಜನೆಯಿಂದ ಭೂಮಿ ಕಳೆದುಕೊಂಡವರಿಗೆ ಜಮೀನು ಹಕ್ಕು ನೀಡುವ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.
ಗೃಹ ಸಚಿವ ಆರಗ ನೇತೃತ್ವದಲ್ಲಿ ಶರಾವತಿ ಸಂತ್ರಸ್ತರ ಸಮಸ್ಯೆ ಕುರಿತು ಸಭೆ ನಡೆಸಲಾಯಿತು. ಸಭೆ ಬಳಿಕ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಶರಾವತಿ ಸಂತ್ರಸ್ತರಿಗೆ ತಾವು ಉಳುಮೆ ಮಾಡುವ ಜಮೀನು ಹಕ್ಕು ನೀಡುವುದು 60 ವರ್ಷದ ಸಮಸ್ಯೆ ಆಗಿತ್ತು. ಮೊನ್ನೆ ಕೇಂದ್ರ ಅರಣ್ಯ ಸಚಿವರ ಭೇಟಿ ಮಾಡಿದ್ವಿ. ಅವರು ಎಲ್ಲಾ ಸರ್ವೆ ಮಾಡಿ ಪ್ರಪೋಸಲ್ ಕಳಿಸಿ ಎಂದಿದ್ದಾರೆ. ಹೀಗಾಗಿ ಪ್ರಸ್ತಾವನೆ ಸಿದ್ಧ ಪಡಿಸಲಾಗಿದೆ ಎಂದರು.
ಈಗಾಗಲೇ ಜಿಲ್ಲಾಡಳಿತ ಸರ್ವೆ ಮಾಡಿ ಪ್ರಸ್ತಾವನೆ ರೆಡಿ ಮಾಡಲಾಗಿದೆ. ಸುಮಾರು 9 ಸಾವಿರ ಎಕರೆ ಜಮೀನು ಹಕ್ಕು ನೀಡುವುದಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸುತ್ತೇವೆ ಎಂದು ಬಿಎಸ್‌ವೈ ಹೇಳಿದರು.